ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಒಟ್ಟಾಗಿ ಹೋರಾಡಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳ ರಾಜ್ಯ ಘಟಕದ ಮುಖಂಡರು ನಿರ್ಣಯಿಸಿದ್ದಾರೆ.
ಇದನ್ನೂ ಓದಿ:ಗುರಿಮೀರಿ ಠೇವಣಿ ಸಂಗ್ರಹ
ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಎಂ.ಸಿ ಸುಧಾಕರ್, ಆಪ್ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಪೃಥ್ವಿರೆಡ್ಡಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಬಸವರಾಜು, ಎನ್ ಸಿಪಿ ರಾಜ್ಯಾಧ್ಯಕ್ಷ ಸಿ ಎಸ್ ಇನಾಂದಾರ್, ಸಿಪಿಐ ಎಂಎಲ್ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ ರೊಜೆರಿಯೋ, ರಾಷ್ಟ್ರೀಯ ಜನತಾದಳ ರಾಜ್ಯಾಧ್ಯಕ್ಷ ಯಾಕುಬ್ ಗುಲ್ವಾಡಿ, ಫಾರ್ವರ್ಡ್ ಬ್ಲಾಕ್ ರಾಜ್ಯಾಧ್ಯಕ್ಷ ಶಿವಶಂಕರ್ ಮತ್ತಿತರರು ಭಾಗವಹಿಸಿದ್ದರು.
ಸಭೆ ಬಳಿಕ ಜಂಟಿ‌ ಸುದ್ದಿಗೋಷ್ಠಿ ನಡೆಸಿದ ನಾಯಕರು, ತಮ್ಮ‌ ಮುಂದಿನ ನಡೆಯ ಬಗ್ಗೆ ತಿಳಿಸಿದರು. ಡಿ.ಕೆ‌. ಶಿವಕುಮಾರ್ ಮಾತನಾಡಿ, ದೇಶಕ್ಕೆ ಬದಲಾವಣೆ ಎಂದು ಅನಿವಾರ್ಯ ಎಂದು ಇಂಡಿಯಾ ಒಕ್ಕೂಟ ಬೆಂಗಳೂರಲ್ಲೇ ಜನ್ಮತಾಳಿ ದೊಡ್ಡ ಸಂದೇಶ ನೀಡಿತು. ಬಳಿಕ ಅನೇಕ‌ ಚುನಾವಣೆ ನಡೆಯಿತು. ಕೆಲವು ಸೋತೆವು, ಕೆಲವು ಗೆದ್ದೆವು ಎಂದರು.
ಇದನ್ನೂ ಓದಿ:ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು -ಎಂಎಲ್‌ಸಿ ಪ್ರತಾಪ್‌ಸಿಂಹ ನಾಯಕ್
ಈಗ ಮತ್ತೆ ಚುನಾವಣೆ ಬಂದಿದೆ. ಹತ್ತು ಪಕ್ಷಗಳು ಒಟ್ಟಿಗೆ ಸೇರಿ ಚರ್ಚೆ ಮಾಡಿದ್ದೇವೆ. ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅವರ ನಂಬರ್ ಮುಖ್ಯವಲ್ಲ, ಅವರದೇ ತತ್ವ ಸಿದ್ಧಾಂತದಡಿ ಪಕ್ಷ ಕಟ್ಟಿಕೊಂಡು ಬಂದಿದ್ದಾರೆ. ಎನ್ ಡಿಎ ಸೋಲಿಸುವುದೇ ಒಂದು ಗುರಿ ಎಂದು ಒಟ್ಟಾಗಿ ಬಂದಿದ್ದೇವೆ ಎಂದರು.
ದೇಶದಿಂದಲೇ ಎನ್‌ಡಿಎ ಕಿತ್ತೊಗೆಯಲು “ಕೋಮುವಾದಿ ಸರ್ವಾಧಿಕಾರ ವರ್ಸಸ್ ಪ್ರಜಾಪ್ರಭುತ್ವ” ನಮ್ಮ‌ ಲೀಡ್ ಲೈನ್. ಪ್ರಜಾಪ್ರಭುತ್ವ ರಕ್ಷಣೆಗಾಗಿ ನಾವೆಲ್ಲ ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದು ಹೇಳಿದ‌ ಅವರು ಬೂತ್ ಮಟ್ಟದಿಂದ ರಾಜ್ಯಮಟ್ಟದವರೆಗೆ ಒಗ್ಗಟ್ಟಾಗಿ ಕೆಲಸ ಮಾಡಲಿದ್ದು, ಸಮನ್ವಯ ಸಮಿತಿ ರಚಿಸಲಾಗುತ್ತದೆ. ತಂತ್ರಗಾರಿಕೆ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ವಿವರಿಸಿದರು.
ಇದನ್ನೂ ಓದಿ:ಭಾರತ ಪ್ರವಾಸ ಬೆನ್ನಲ್ಲೇ ಸಿನಿಮಾಗೆ ಕಮ್​ಬ್ಯಾಕ್​ ಮಾಡಿದ ಪ್ರಿಯಾಂಕಾ ಚೋಪ್ರಾ
ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ದೇಶ ಇಕ್ಕಟ್ಟು ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ದೇಶದಲ್ಲಿ ಯಾರಿಗೆ ಭಯ ಇಲ್ಲ ಎಂದು ಹುಡುಕಬೇಕಾಗಿದೆ. ಎಲ್ಲರೂ ಒಗ್ಗಟ್ಟಾಗಿ 28 ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದರು.
26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
