ಉಡುಪಿ:ಸ್ವಚ್ಛತಾ ಹಿ ಸೇವಾ ಅಭಿಯಾನದ ಮೂಲಕ ಕೈಗೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹಿನ್ನೀರು ಪ್ರದೇಶವೊಂದರಲ್ಲೇ ಬರೋಬ್ಬರಿ 500 ಕೆ.ಜಿ. ಪ್ಲ್ಯಾಸ್ಟಿಕ್ ತ್ಯಾಜ್ಯ ಸಂಗ್ರಹಗೊಂಡಿದೆ. ಉಡುಪಿ ಜಿಲ್ಲಾ ಪಂಚಾಯತ್ ಕೋಟತಟ್ಟು ಮತ್ತು ಕೋಡಿ ಗ್ರಾಮ ಪಂಚಾಯತ್​ಗಳ ಸಹಯೋಗದಲ್ಲಿ ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್​ನ ಬಳಿಯ ಕೋಡಿ ಹಿನ್ನೀರು ಪ್ರದೇಶದಲ್ಲಿ ಈ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.
ಹಿನ್ನೀರಿನ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಕಸ ಶೇಖರಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಜತೆಗೆ ಜಿಲ್ಲಾಡಳಿತ ಸ್ವಚ್ಛತೆಗೆ ಈ ಸ್ಥಳವನ್ನು ಆಯ್ಕೆ ಮಾಡಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಇದು ಸ್ವಚ್ಛತೆ ಮತ್ತು ಪರಿಸರ ಜಾಗೃತಿ ಉತ್ತೇಜಿಸುವಲ್ಲಿ ಮಹತ್ವದ ಪ್ರಯತ್ನವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಸ್ವಚ್ಚತಾ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ರಾಷ್ಟ್ರಧ್ವಜಾರೋಹಣದೊಂದಿಗೆ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬದ್ಧತೆ ಹೇಳುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಈ ಹಿನ್ನೀರಿನಿಂದ 500 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಇತರ ಅವಶೇಷಗಳನ್ನು ಸಂಗ್ರಹಿಸಲಾಯಿತು. ಈ ತ್ಯಾಜ್ಯವನ್ನು ನಂತರ ಸರಿಯಾದ ಮತ್ತು ವೈಜ್ಞಾನಿಕ ವಿಲೇವಾರಿಗಾಗಿ ಘನ ತ್ಯಾಜ್ಯ ನಿರ್ವಹಣೆ ಕೇಂದ್ರಕ್ಕೆ ಕಳುಹಿಸಲಾಯಿತು.
ಜಲಮಾಲಿನ್ಯ ತಡೆಗಟ್ಟುವ ಮಹತ್ವದ ಬಗ್ಗೆ ಪ್ರವಾಸಿಗರು ಮತ್ತು ಸ್ಥಳೀಯ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿದೆ. ವೈವಿಧ್ಯಮಯ ಗುಂಪನ್ನು ಒಳಗೊಳ್ಳುವ ಮೂಲಕ ಮತ್ತು ಗಣನೀಯ ಪ್ರಮಾಣದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ, ಈ ಉಪಕ್ರಮವು ಪರಿಸರವನ್ನು, ವಿಶೇಷವಾಗಿ ಹಿನ್ನೀರಿನ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಮತ್ತು ನಮ್ಮ ನೈಸರ್ಗಿಕ ವಾತಾವರಣದ ಬಗ್ಗೆ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವ ಬಲವಾದ ಬದ್ಧತೆಯನ್ನು ಪ್ರದರ್ಶಿಸಿತು.
ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಉಡುಪಿ ಸಿಇಒ ಪ್ರಸನ್ನ, ಕುಂದಾಪುರ ಎಸಿ ಎಚ್. ರಶ್ಮಿ, ಎಸ್ಬಿಎಂ-ಜಿ ಉಡುಪಿಯ ನೋಡಲ್ ಅಧಿಕಾರಿ ಎ. ಶ್ರೀನಿವಾಸ್ ರಾವ್, ಪಿಆರ್​ಐ (ಪಂಚಾಯತಿ ರಾಜ್ ಸಂಸ್ಥೆ), ಕೋಡಿ ಮತ್ತು ಕೋಟತಟ್ಟು ಗ್ರಾಪಂ ಅಧಿಕಾರಿಗಳು, ಸ್ಥಳೀಯ ವಿದ್ಯಾರ್ಥಿಗಳು, ಸ್ವ-ಸಹಾಯ ಗುಂಪುಗಳ ಸದಸ್ಯರು ಮತ್ತು ನೈರ್ಮಲ್ಯ ಸಿಬ್ಬಂದಿ ಭಾಗವಹಿಸಿದ್ದರು. ಈ ಅಭಿಯಾನದಲ್ಲಿ 70ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಬಾಲಕಿ ಬರೆದ ಪತ್ರಕ್ಕೆ ಎರಡು ಗಂಟೆಯಲ್ಲೇ ಸಿಎಂ ಕಚೇರಿ ಸ್ಪಂದನೆ; ವಿಜಯವಾಣಿಗೆ ಮನವಿ ಮಾಡಿದ್ದ 3ನೇ ತರಗತಿ ವಿದ್ಯಾರ್ಥಿನಿ

ಓ.. ಮತ್ತೆ ಸದ್ದು ಮಾಡುತ್ತಿರುವ ‘ಕಾಂತಾರ’; ವರ್ಷದ ಬಳಿಕವೂ ನೆನಪಿಸಿಕೊಳ್ಳುತ್ತಿರುವ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
