ಬೆಂಗಳೂರು:ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ನೇಮಕಗೊಂಡಿದ್ದು, ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿರುವುದು ಗಮನ ಸೆಳೆದಿದೆ.
“ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ಶುಭ ಹಾರೈಸಿದೆ.
ಇದನ್ನೂ ಓದಿ:ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ಪಟ್ಟ; ರಾಜ್ಯದಲ್ಲಿ ತಗ್ಗಿಲ್ಲ ರಾಜಾಹುಲಿ ಪ್ರಭಾವ!
ಮಾತ್ರವಲ್ಲದೆ, ಇದೇ ವಿಚಾರವನ್ನು ರಾಜಕೀಯ ಟೀಕೆಗೆ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್, “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿ ಹೇಳಿಕೊಂಡಿದೆ.
ಇದನ್ನೂ ಓದಿ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಬಿ.ಎಲ್​. ಸಂತೋಷ್​ ಏನಂದ್ರು ಗೊತ್ತಾ?
ಕಾಂಗ್ರೆಸ್​ನ ಈ ರಾಜಕೀಯಾತ್ಮಕ ಪೋಸ್ಟ್​ಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಕಾಂಗ್ರೆಸ್​ಗೆ ಇದು ಒಂಥರಾ ತಿರುಗುಬಾಣದಂತಾಗಿಯೂ ಆಗಿದೆ. ಏಕೆಂದರೆ, ಕಾಂಗ್ರೆಸ್​ನಲ್ಲಿಯೂ ಹೇಗೆ ಕುಟುಂಬ ರಾಜಕಾರಣ ಇದೆ ಎಂಬುದನ್ನು ಕೆಲವರು ಬೊಟ್ಟು ಮಾಡಿ ತೋರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಅವರ ಮುಂದಿರುವ ಸವಾಲುಗಳು ಯಾವುವು?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಹಿಂದೆ ಏನೇನಿದೆ ಲೆಕ್ಕಾಚಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
