ಬೆಂಗಳೂರು:ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ. ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದ್ದಾರೆ. ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿ ಬಹುತೇಕ ಎಲ್ಲ ವೆಚ್ಚಗಳು ಶೇ.30 ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಅನಿವಾರ್ಯವಾಗಿದೆ ಎಂದು ಸಿಎಂ ಬಳಿ ವಿನಂತಿಸಿಕೊಂಡಿದ್ದಾರೆ.
ನಂದಿನಿ ಹಾಲಿನ ಮಾರಾಟ ದರಕ್ಕೆ ತುಲನೆ ಮಾಡಿದಾಗ ಇತರೇ ಸಂಸ್ಥೆಗಳ ದರವು ಪ್ರತಿ ಲೀಟರ್​ಗೆ ರೂ. 8 ರಿಂದ 10 ರೂ. ಹೆಚ್ಚಳವಾಗಿದೆ. ಹೆಚ್ಚಳ ಮಾಡಲಿರುವ 3 ರೂ.ಗಳಲ್ಲಿ ಕನಿಷ್ಠ ರೂ. 2 ನ್ನು ಹಾಲು ಉತ್ಪಾದಕರಿಗೆ, ಉಳಿದ 1 ರೂ.ನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ವಿವರಿಸಿದ್ದಾರೆ. ಕೆಎಂಎಫ್ ಹಾಗೂ 14 ಹಾಲು ಒಕ್ಕೂಟಗಳ ವಹಿವಾಟು 16,440.74 ಕೋಟಿಯಿಂದ (2019-20 ರಲ್ಲಿ) ಈ ಸಾಲಿಗೆ 19,732 ಕೋಟಿ ರೂ.ಗೆ (ಶೇ.20 ಹೆಚ್ಚಳ)ಹೆಚ್ಚಳವಾಗಿದೆ. 2022-23ನೇ ಸಾಲಿನಲ್ಲಿ 25 ಸಾವಿರ ಕೋಟಿ ರೂ. ತಲುಪುವ ಗುರಿ ಹೊಂದಲಾಗಿದೆ ಎಂದರು. ಪಶು ಸಂಗೋಪನೆ ಕಾರ್ಯಚಟುವಟಿಕೆಗಳಿಗೆ 2019-20 ರಲ್ಲಿ ವಾರ್ಷಿಕವಾಗಿ ಕೆಎಂಎಫ್ ನೀಡುತ್ತಿದ್ದ 50 ಕೋಟಿ ರೂ.ಗಳನ್ನು 80 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆ ರೂಪಿಸಿದ್ದು, 2026-27ನೇ ಸಾಲಿಗೆ 133.84 ಲಕ್ಷ ಲೀಟರ್ ಹಾಲು ಸಂಗ್ರಹ ಗುರಿ ಹೊಂದಲಾಗಿದೆ ಎಂದಿದ್ದಾರೆ.
ಚೆನ್ನೈ, ಮುಂಬಯಿ, ಗೋವಾ, ಹೈದ್ರಾಬಾದ್, ಪುಣೆಗಳಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ನಂದಿನಿ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟದ ವಿದರ್ಭ ಪ್ರಾಂತದಲ್ಲಿ ಹಾಲಿನ ಮಾರಾಟ ಪ್ರಾರಂಭಿಸಲಾಗಿದೆ. ಕೆಫೆ ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಅನ್ನು ಈಗಾಗಲೆ ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಮುಂದಿನ ವರ್ಷದಿಂದ ಬೇರೆ ಬೇರೆ ನಗರಗಳಲ್ಲಿ 100ಕ್ಕೂ ಅಧಿಕ ವಿನೂತನ ನಂದಿನಿ ಕೆಫೆ ಮೂ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದ್ದಾರೆ.
ಅಮೆರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ಥಾನ, ಭೂತಾನ್, ಸಿಂಗಾಪೂರ, ಬಹರೆನ್ ಮುಂತಾದ ದೇಶಗಳಿಗೆ 20 ಕೋಟಿ ರೂ.ಗೂ ಅಧಿಕ ಮೌಲ್ಯದ ನಂದಿನಿ ಹಾಲು, ಹಾಲಿನ ಉತ್ಪನ್ನ ಗಳನ್ನು ಮಾರಾಟ ಮಾಡಲಾಗಿದೆ. 2022-23ರಲ್ಲಿ 300 ಕೋಟಿ ರೂ. ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದಿದ್ದಾರೆ.
ರಾಜಸ್ಥಾನ ಪೊಲೀಸರ ಮನಗೆದ್ದ ‘ಕೆಜಿಎಫ್​-2’ ‘ವಯಲೆನ್ಸ್​’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
