ಬೆಂಗಳೂರು:ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಇಟ್ಟಿದೆ.
ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2022ರ ಜ.1ರಿಂದ ಪೂರ್ವಾನ್ವಯವಾಗಿ ತನ್ನ ನೌಕರರಿಗೆ ಶೇ.3 ತುಟ್ಟಿಭತ್ಯೆ ಮಂಜೂರು ಮಾಡಿ ಉಲ್ಲೇಖಿತ ಆದೇಶವನ್ನು ಹೊರಡಿಸಿದೆ.
ಆದ್ದರಿಂದ ಪ್ರಸ್ತುತ ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಈ ವರ್ಷದ ಜ. 1ರಿಂದ ಪೂರ್ವಾನ್ವಯ ಆಗುವಂತೆ ಶೇ. 3 ತುಟ್ಟಿಭತ್ಯೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪತ್ರಮುಖೇನ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಕರೊನಾ..; ಅಮಿತ್​ ಷಾ ಅಭಿಪ್ರಾಯವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 3 =
Remember me
