ಬೆಂಗಳೂರು:ರಾಜ್ಯ ಸರ್ಕಾರದ ಬಜೆಟ್​ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ನಗರಾಭಿವೃದ್ಧಿ ಇಲಾಖೆಗಳಿಗೆ ಎಂದಿನಂತೆ ಸಾಕಷ್ಟು ಮಹತ್ವ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆಗೆ 21,160 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದು, ಇದು ಒಟ್ಟಾರೆ ಬಜೆಟ್ ಮೊತ್ತದ ಶೇ.5 ಆಗುತ್ತದೆ. ಲೋಕೋಪಯೋಗಿ ಇಲಾಖೆಗೆ 10,424 ಕೋಟಿ ರೂ. ನಿಗದಿಪಡಿಸಲಾಗಿದ್ದು, ಇದು ಒಟ್ಟಾರೆ ಬಜೆಟ್​ನ ಶೇ. 3 ಪಾಲು ಪಡೆದಿದೆ. ನಗರಾಭಿವೃದ್ಧಿ ಮತ್ತು ವಸತಿ ಈ ಎರಡೂ ಇಲಾಖೆಗಳನ್ನು ಸೇರಿ 18,155 ಕೋಟಿ ರೂ.ಒದಗಿಸಲಾಗಿದ್ದು, ಇದು ಬಜೆಟ್​ನ ಶೇ.4 ಪಾಲು ಪಡೆದಿದೆ.
ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸುವ ಚಿಂತನೆಯನ್ನು ಬಜೆಟ್​ನಲ್ಲಿ ವ್ಯಕ್ತಪಡಿಸಲಾಗಿದ್ದು, ಇದಕ್ಕಾಗಿ ಪ್ರಗತಿ ಪಥ ಯೋಜನೆ ರೂಪಿಸಲಾಗಿದೆ. ಬಾಹ್ಯ ನೆರವಿನೊಂದಿಗೆ ಈ ಯೋಜನೆ ಜಾರಿಗೊಳಿಸುವುದಾಗಿ ಹೇಳಲಾಗಿದೆ. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್​ನಲ್ಲಿ ಘೊಷಿಸಲಾಗಿದೆ.
2024-25 ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲು 5,000 ಕೋಟಿ ರೂ.ಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
16 ಕೋಟಿ ಮಾನವ ದಿನ ಸೃಜನೆ:ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಅಂದಾಜು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಪ್ರಮುಖವಾಗಿ ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವ ಮತ್ತು ಪ್ರತಿ ತಾಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ವಿುಸುವ ಗುರಿ ಇಟ್ಟುಕೊಳ್ಳಲಾಗಿದೆ.
ಎಣ್ಣೆ ಗಾಣ:ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಬಜೆಟ್​ನಲ್ಲಿ ಘೊಷಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.
ಗ್ರಾ.ಪಂ.ಗಳಿಗೆ ಹೊಂಬೆಳಕು:ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾ ವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಹೊಂಬೆಳಕು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ 50 ಗ್ರಾ. ಪಂ.ಗಳಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ದೀಪ ಅಳವಡಿಸಲು ಉದ್ದೇಶಿಸಲಾಗಿದೆ.
ಹಿರಿಯರ ಆರೈಕೆಗೆ ಕೇಂದ್ರ:ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆ ನಿರ್ವಹಿಸಲು ಆರೈಕೆಉಪಶಮನ (ಕಚ್ಝ್ಝಚಠಿಜಿಡಛಿ ಇಚ್ಟಛಿ) ಕೇಂದ್ರಗಳನ್ನು ಪ್ರಾರಂಭಿಸಲು ಬಜೆಟ್​ನಲ್ಲಿ ಘೊಷಿಸಲಾಗಿದೆ.
ದಾಖಲೆಗಳಿಗೆ ಭೂ ಸುರಕ್ಷಾ:ಕಂದಾಯ ಇಲಾಖೆಯಲ್ಲಿ ಮಹತ್ವದ ಸುಧಾರಣೆ ಕ್ರಮಗಳನ್ನು ಘೋಷಿಸಿರುವ ಸಿಎಂ ಸಿದ್ದರಾಮಯ್ಯ, ಭೂ ಸುರಕ್ಷಾ ಯೋಜನೆ ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ. ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕಾ್ಯನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ಲೈನ್ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಮುಖ ಅಂಶಗಳು ಇಲ್ಲಿವೆ.
1) ಆಕಾರ್​ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್​ಬಂದ್​ಗಳ ಗಣಕೀಕರಣ ಕಾರ್ಯ
2) ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೋಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನ ಮುಂದುವರಿಕೆ, ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0 ರಡಿ ಪೋಡಿ ಮುಕ್ತ ಮಾಡಲು ಆದ್ಯತೆ
3) 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆ ವಿಸ್ತರಣೆ
4) ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ನೋಟೀಸುರಹಿತ ಮ್ಯುಟೇಷನ್​ಗಳು (ಪೌತಿ ಖಾತೆ ಮತ್ತು ಜೆ-ಸ್ಲಿಪ್ ಮುಖಾಂತರ ಆಗುವ ಮ್ಯುಟೇಷನ್ಗಳನ್ನು ಹೊರತುಪಡಿಸಿ) ನಿಗದಿತ ತಂತ್ರಾಂಶದಲ್ಲಿ ಸ್ವಯಂ-ಚಾಲಿತವಾಗಿ ಅನುಮೋದನೆಯಾಗುವಂತೆ ಕ್ರಮ.
5) ಆಧುನಿಕ ಉಪಕರಣಗಳ ಮುಖಾಂತರ ಕಡಿಮೆ ಅವಧಿಯಲ್ಲಿ ಭೂಮಾಪನ ಕಾರ್ಯಗಳನ್ನು ಕೈಗೊಂಡು ನಿಖರವಾದ ಡಿಜಿಟಲ್ ದಾಖಲೆಗಳನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ನೀಡಲು ಅಗತ್ಯವಾದ ಡ್ರೋನ್ ಮತ್ತಿತರ ಉಪಕರಣಗಳು ಜಿಲ್ಲಾ ಭೂಮಾಪನಾ ಕಚೇರಿಗೆ ಒದಗಿಸಲು ಕ್ರಮ
6) ಡಿಜಿ ಕಂದಾಯ ಯೋಜನೆಯಡಿ ಕಂದಾಯ ಇಲಾಖೆಯು ನೀಡುವ ಎಲ್ಲಾ ಸೇವೆಗಳನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಡಿಜಿಟಲ್ ಪ್ಲಾಟ್ ಫಾರಂ ಮೂಲಕ ಸಾರ್ವಜನಿಕರಿಗೆ ಒದಗಿಸಲು ಕ್ರಮ. ಇ-ಆಫೀಸ್ ವ್ಯವಸ್ಥೆ ಗ್ರಾಮಮಟ್ಟದವರೆಗೆ ವಿಸ್ತರಣೆ. ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರಿಗೆ ಲ್ಯಾಪ್​ಟಾಪ್.
7) ಸರ್ಕಾರವು ದಾಖಲೆ ರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿಯ ಸುಮಾರು 2 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರ
8) ಭೂ-ಮಾಪನ ಇಲಾಖೆಗೆ ಸೇರಿದ 240 ಅಭಿಲೇಖಾಲಯ ಕೊಠಡಿಗಳ ಆಧುನೀಕರಣ
9) ಭೂಮಿ ತಂತ್ರಾಂಶದಲ್ಲಿ ಫ್ಲಾಗ್ ಮಾಡಲಾಗಿರುವ ಸರ್ಕಾರಿ ಜಮೀನಿನ ಪಹಣಿಗಳನ್ನು ಲ್ಯಾಂಡ್ ಬೀಟ್ ಆಪ್ ಬಳಸಿ, ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರ ಸರ್ಕಾರಿ ಜಮೀನಿನ ಒತ್ತುವರಿ ಹಾಗೂ ಸಂರಕ್ಷಣೆಗೆ ನಿಗಾ
ಭ್ರಷ್ಟಾಚಾರ ನಿಯಂತ್ರಣ, ದಕ್ಷತೆ ಹೆಚ್ಚಳಕ್ಕೆ ಪಂಚ ಕ್ರಮ:ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೇವಾ ಪೂರೈಕೆ ತ್ವರಿತಗೊಳಿಸಲು, ಭ್ರಷ್ಟಾಚಾರ ನಿಯಂತ್ರಿಸಲು ಮತ್ತು ದಕ್ಷತೆಯನ್ನು ಹೆಚ್ಚಿಸಲು 5 ಉಪ ಕ್ರಮಗಳನ್ನು ಬಜೆಟ್​ನಲ್ಲಿ ಘೊಷಿಸಲಾಗಿದೆ. ಅವುಗಳು ಈ ರೀತಿ ಇವೆ.
1) ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು.
2) ಗ್ರಾಪಂಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ ಅಠಠಛಿಠಿ Mಟ್ಞಛಿಠಿಜಿಠಚಠಿಜಿಟ್ಞ ನೀತಿ ಜಾರಿಗೆ ತರಲಾಗುವುದು.
3) ಎಲ್ಲಾ ಗ್ರಾ.ಪಂ.ಗಳಲ್ಲಿ ಇ-ಆಫೀಸ್ ಪ್ರಾರಂಭಿಸಲಾಗುವುದು.
4) ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು.
5) ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೂ ಹೊಸ ಪರ್ವ:?ಕಡ್ಡಾಯವಾಗಿ ನೋಂದಾಯಿಸಬಹುದಾದ ಆಯ್ದ ದಾಖಲೆಗಳ ಇ-ನೋಂದಣಿಯನ್ನು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಎರಡು ಪಕ್ಷಗಳ ಉಪಸ್ಥಿತಿಯಿಲ್ಲದೆ ನೋಂದಣಿ ಮಾಡಲು ಕ್ರಮ. ? ಅಢಠಿಜಿಞಛಿ ಅಢಡಿಜಛ್ಟಿಛಿ ್ಕಜಜಿಠಠ್ಟಿಚಠಿಜಿಟ್ಞ ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗಳಿಗೆ ತಿದ್ದುಪಡಿ. ? ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಎಲ್ಲ ತಂತ್ರಾಂಶಗಳ ಏಕೀಕರಣ. ನಾಗರಿಕರ ಅನುಕೂಲಕ್ಕಾಗಿ ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಚೇರಿಯನ್ನು ತೆರೆಯಲಾಗುವುದು. ?ನಾಗರಿಕರು ದೃಢೀಕೃತ ಪ್ರತಿಗಳನ್ನು ಪಡೆಯುವಲ್ಲಿನ ವಿಳಂಬವನ್ನು ತಗ್ಗಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ದಾಖಲೆಗಳ ವಿತರಣೆಯನ್ನು ಸ್ವಯಂ ಚಾಲಿತ ಗೊಳಿಸಲು ಕ್ರಮ.
875 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿಗೆ – 5736 ಕೋಟಿ:ರಾಜ್ಯದ 875 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆ ನೆರವಿನೊಂದಿಗೆ 5736 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸುವುದಾಗಿ ಬಜೆಟ್​ನಲ್ಲಿ ಘೊಷಿಸಲಾಗಿದೆ. ಇದಲ್ಲದೆ, ರಾಜ್ಯದ 1300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್​ಎಚ್​ಡಿಪಿ) ಹಂತ – 5 ಆರಂಭಿಸಲು ಬಜೆಟ್​ನಲ್ಲಿ ಉದ್ದೇಶಿಸಲಾಗಿದೆ. ಮುಂಬೈ-ಚೆನ್ನೈ ಕಾರಿಡಾರ್ ಮಾದರಿಯಲ್ಲಿ ರಾಜ್ಯದಲ್ಲಿ ಎರಡು ಆರ್ಥಿಕ ಕಾರಿಡಾರ್​ಗಳನ್ನು ನಿರ್ವಿುಸಲು ಬಜೆಟ್​ನಲ್ಲಿ ಘೊಷಿಸಲಾಗಿದೆ. ಮಂಗಳೂರು ಬಂದರಿನಿಂದ ಬೆಂಗಳೂರು ಹಾಗೂ ಬೀದರಿನಿಂದ ಬೆಂಗಳೂರು ನಡುವೆ ಈ ಕಾರಿಡಾರ್​ಗಳನ್ನು ನಿರ್ವಿುಸಲು ಉದ್ದೇಶಿಸಲಾಗಿದೆ.

‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
