ಹಾವೇರಿ:ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಅಪಮಾನ ಮಾಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಲಿಂಗಾಯತ ಸಮುದಾಯಕ್ಕೆ ಸಿಟ್ಟಿದೆ. ಸಮುದಾಯದ ಜನರು ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸಿಎಂ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್​ನವರು ಸುಳ್ಳಿನ ಭರವಸೆ ನೀಡುತ್ತಿದ್ದಾರೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ ಕಾಂಗ್ರೆಸ್ ಅಭಿವೃದ್ಧಿಯ ಚಿಂತನೆಯನ್ನೂ ಮಾಡಲ್ಲ. ಬದಲಾಗಿ ಭ್ರಷ್ಟಾಚಾರವನ್ನೇ ಮಾಡುತ್ತಾ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ, ಪ್ರತಾಪ್ ಸಿಂಹ ವ್ಯಂಗ್ಯ; ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು…
ಕಾಂಗ್ರೆಸ್ ಎಂಬುದು ಭ್ರಷ್ಟಾಚಾರದ ಪಕ್ಷವಾಗಿದ್ದು, ಭಯೋತ್ಪಾದಕರನ್ನು ಬೆಂಬಲಿಸುತ್ತದೆ. ಕಾಂಗ್ರೆಸ್​ನ ತುಷ್ಟೀಕರಣದಿಂದ ಕರ್ನಾಟಕದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸುಳ್ಳು ಗ್ಯಾರಂಟಿ ಘೋಷಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಸರ್ಕಾರ ರಚಿಸಿದ ಮೇಲೆ ಯಾವುದೇ ಘೋಷಣೆ ಈಡೇರಿಸಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ನೀಡುತ್ತಿರುವ ಸುಳ್ಳು ಗ್ಯಾರಂಟಿಗಳನ್ನು ನಂಬಿ ಜನರು ಮೋಸ ಹೋಗುತ್ತಿದ್ದಾರೆ. 50 ವರ್ಷಗಳಿಂದ ಬಡವರ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿದೆ. ಆದರೆ ಬಿಜೆಪಿಗೆ ಬಡವರ ಕಲ್ಯಾಣ ಮತ್ತು ಸಶಕ್ತೀಕರಗೊಳಿಸುವುದು ಮೊದಲ ಆದ್ಯತೆ. ಬಡವರಿಗೆ ಉಚಿತ ರೇಷನ್, ಆರೋಗ್ಯ ತಪಾಸಣೆ, ಪಿಎಂ ಆವಾಸ್ ಯೋಜನೆ ಮೂಲಕ ಮನೆ ಕೊಟ್ಟಿದ್ದೇವೆ ಎಂದು ಪ್ರಧಾನಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 19 =
Remember me
