ಬೆಂಗಳೂರು:ದಕ್ಷಿಣ ಭಾರತದ ಮೊದಲ ವಂದೇ ಭಾರತ್​ ರೈಲಿಗೆ (Vande Bharat Train) ಚಾಲನೆ, ನಾಡಪ್ರಭು ಕೆಂಪೇಗೌಡ (Nadaprabhu Kempegowda)ರ ಪ್ರತಿಮೆ ಅನಾವರಣ ಹಾಗೂ ವಿಮಾನ ನಿಲ್ದಾಣದ ಟರ್ಮಿನಲ್​-2 ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು (ನ.11) ರಾಜ್ಯ ರಾಜಧಾನಿ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸರಿಯಾಗಿ ಪ್ರಧಾನಿ ಮೋದಿ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣ (HAL Airport)ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ‌ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸಧ ತೇಜಸ್ವಿ ಸೂರ್ಯ, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ಆರಕ್ಷಕ ಆಯುಕ್ತ ಪ್ರತಾಪ್ ರೆಡ್ದಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಧಾನಿ ಆಗಮನದ ಸಂದರ್ಭದಲ್ಲಿ ತುಂತುರು ಮಳೆ ಕೂಡಾ ಬಂದದ್ದು, ಪ್ರಧಾನಿ ಅವರನ್ನು ವರುಣ ಕೂಡಾ ಆಗಮಿಸಿದ್ದು ವಿಶೇಷವಾಗಿತ್ತು.
ಎಚ್ಎಎಲ್​ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಪ್ರಧಾನಿ ಮೋದಿ ಶಾಸಕರ ಭವನದತ್ತ ಹೊರಟರು. ಇಂದು ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಬೆಳಗ್ಗೆ 9.45ಕ್ಕೆ ಶಾಸಕರ ಭವನದ ಆವರಣದಲ್ಲಿ ಸ್ಥಾಪಿಸಲಾಗಿರುವ ದಾಸಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆ ನೆರವೇರಿಸಿದರು.
ರಾಜ್ಯಪಾಲ ಥಾವರ ಚಂದ್ ಗೆಹಲೋತ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ‌ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಹಂಗಾಮಿ ಸಭಾಪತಿ ಮಲ್ಕಾಪುರೆ, ಸಚಿವ ಶ್ರೀರಾಮುಲು ಮತ್ತಿತರರು ಭಾಗವಹಿಸಿದ್ದರು.
ಮೋದಿ ಕಂಬಳಿ ಹೊದ್ದು ಕನಕದಾಸ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಮೋದಿ ಹೆಗಲ ಮೇಲೆ ಕಂಬಳಿ ಹೊದ್ದುಕೊಂಡಿದ್ದರು. ಕುರುಬ ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿದ್ದರು.
.
LIVE| ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ! ಕ್ಷಣದ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ…

ಪ್ರಗತಿ ಚಾಲನೆಗೆ ಮೋದಿ; ಪ್ರಧಾನಿಯಿಂದ ಕೆಂಪೇಗೌಡ ಪುತ್ಥಳಿ ಅನಾವರಣ ಇಂದು

ರಣಬೀರ್​-ಆಲಿಯಾ ಮುದ್ದಿನ ಮಗಳನ್ನು ನೋಡೋಕೆ ಯಾರಿಗೂ ಅನುಮತಿ ಇಲ್ಲ … ಯಾಕೆ ಗೊತ್ತಾ?

Sign in to your account
Please enter an answer in digits:20 − 10 =
Remember me
