ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಜನ್ಮದಿನ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಗಾಂಧೀಜಿ ಜಯಂತಿ ನಿಮಿತ್ತ ‘ಸೇವಾ ಪಾಕ್ಷಿಕ’ವನ್ನು ಬಿಜೆಪಿ ಹಮ್ಮಿಕೊಂಡಿದೆ. ಮೋದಿಯವರ ಜನ್ಮದಿನವಾದ 17 (ಭಾನುವಾರ)ರಂದು ಚಾಲನೆ ಪಡೆಯಲಿದೆ. ಪಿಎಂ ವಿಶ್ವಕರ್ಮ ಯೋಜನೆಯನ್ನು ವರ್ಚುವಲ್ ವೇದಿಕೆ ಮೂಲಕ ಮೋದಿಯವರು 10ಕ್ಕೆ ಉದ್ಘಾಟಿಸಲಿದ್ದಾರೆ.
ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿಸೂರ್ಯ, ಶಾಸಕರಾದ ಉದಯ್ ಬಿ.ಗರುಡಾಚಾರ್ ಎಚ್.ಎಸ್.ಗೋಪಿನಾಥರೆಡ್ಡಿ ಭಾಗವಹಿಸಲಿದ್ದಾರೆ.ಕೇಂದ್ರ ಸರ್ಕಾರದ ಅಧಿಕೃತ ಕಾರ್ಯಕ್ರಮ ಇದಾಗಿದ್ದರೂ ಪಕ್ಷದ ಸೇವಾ ಚಟುವಟಿಕೆಗಳಲ್ಲಿ ಸೇರಿದೆ. ಸೆ.17 ರಿಂದ ಅ.2ರವರೆಗೆ 15 ದಿನಗಳ ಕಾಲ ಮಂಡಲದಿಂದ ರಾಜಧಾನಿಯವರೆಗೆ ವಿವಿಧ ಸೇವಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆ ಮಾರ್ಗದರ್ಶನ, ಜಿಲ್ಲಾ ಕೋರ್ ಕಮಿಟಿ ಸಭೆಗಳಲ್ಲಿ ಚರ್ಚೆ ನಡೆಸಿ ಸೇವಾ ಪಾಕ್ಷಿಕ ಅಚ್ಚುಕಟ್ಟಾಗಿ ನಿರ್ವಹಿಸಲು ಸಂಘಟನೆಯನ್ನು ಸಜ್ಜುಗೊಳಿಸಲಾಗಿದೆ. ಈ ಅವಧಿಯಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಸ್ವಉದ್ಯೋಗಕ್ಕೆ 10 ಸಾವಿರ ರೂ ಸಾಲ ನೀಡುವ ಇ-ಶ್ರಮ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳ ವಿತರಣೆ, ಸಸಿ ನೆಡುವಿಕೆ ಇತ್ಯಾದಿ ಕಾರ್ಯಕ್ರಮಗಳಿರಲಿವೆ.
ಕೇಂದ್ರ ಸರ್ಕಾರದ ಸಾಧನೆಗಳು, ಕೊಡುಗೆಗಳು, ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಸಾಧನೆ ತಿಳಿಸುವ ಪ್ರದರ್ಶಿನಿ ವ್ಯವಸ್ಥೆಯಾಗಿದೆ. ಈ ಚಟುವಟಿಕೆಗಳು ಆಯಾ ಜಿಲ್ಲೆಯ ತಯಾರಿಗೆ ತಕ್ಕಂತೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + 7 =
Remember me
