ತುಮಕೂರು:ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 113ನೇ ಜನ್ಮಜಯಂತಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶ್ರೀಗಳಿಗೆ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
‘ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ’ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿ ಶ್ರೀಗಳಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ತ್ರಿವಿಧ ದಾಸೋಹದ ಮೂಲಕ ಲೋಕಮಾನ್ಯರಾಗಿದ್ದ ಶಿವಕುಮಾರ ಶ್ರೀಗಳ ಜನ್ಮದಿನವಾದ ಏ.1ರಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಸಲ್ಲಿಸುತ್ತಿದ್ದರು.
Tributes to His Holiness Dr. Sree Sree Sree Sivakumara Swamigalu on his Jayanti. His rich contribution to society continues to inspire.
ಪರಮ‌ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ.
— Narendra Modi (@narendramodi)April 1, 2020

ಶ್ರೀಗಳು ಲಿಂಗೈಕ್ಯರಾದ ಬಳಿಕ 2ನೇ ಜನ್ಮಜಯಂತಿ ಇದಾಗಿದ್ದು, ಬುಧವಾರ ಬೆಳಗ್ಗೆ 8.30ಕ್ಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ. 2019ರ ಜ.21ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಆ ಸಂದರ್ಭ ಶ್ರೀಮಠಕ್ಕೆ ಮೋದಿ ಆಗಮಿಸಿರಲಿಲ್ಲ. ಈ ವರ್ಷ ಜ.2ರಂದು ಮಠಕ್ಕೆ ಭೇಟಿ ನೀಡಿದ್ದ ಅವರು, ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.
ಮನುಷ್ಯನಿಗೆ ಆವರಿಸುತ್ತೆ ಮದ್ದಿಲ್ಲದ ಕಾಯಿಲೆ: ನಿಜವಾಯ್ತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fifteen =
Remember me
