ಬೆಂಗಳೂರು:ಪ್ರತಿಯೊಂದು ವಿಷಯ, ಅಂಶಕ್ಕೂ ಸೂಕ್ಷ್ಮವಾಗಿ ಸ್ಪಂದಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಹಾಗೂ ಭಾರತೀಯತೆಗೆ ಸದಾ ತುಡಿತ, ಮಿಡಿಯುತ್ತಿದ್ದು, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಫೂರ್ತಿ ತುಂಬುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ವಿಧಾನ ಸೌಧ ಮುಂಭಾಗದಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಆಯೋಜಿಸಿದ್ದ ಒಲಿಂಪಿಕ್ ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಸೈಕಲ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಚ್ಛ ಭಾರತದಿಂದ ಹಿಡಿದು ಪ್ರತಿಯೊಂದು ಕಾರ್ಯಕ್ರಮದಲ್ಲಿ ಮೋದಿಯವರ ಸೂಕ್ಷ್ಮ ಸಂವೇದನೆ ಎದ್ದು ಕಾಣುತ್ತದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಜೀತೋ ಇಂಡಿಯಾ ಎಂದು ಹೇಳುವ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸಿದ್ದು, ಅದರ ಭಾಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೈಕಲ್ ರ್ಯಾಲಿಯಲ್ಲಿ 56,000 ಯುವ ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ‌ ತಿಳಿಸಿದರು.
ಯುವ ಜನತೆ ದೇಶದ ಶಕ್ತಿ ಹಾಗೂ ಭವಿಷ್ಯವಾಗಿದ್ದು, ಶಿಸ್ತಿನಿಂದ ಒಳ್ಳೆಯ ನಡವಳಿಕೆ ರೂಪುಗೊಳ್ಳುತ್ತದೆ. ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯುವ ಸಮೂಹ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ನನ್ನ ಮುಂದಿನ ಕಾರ್ಯಕ್ರಮಗಳಲ್ಲಿ ಯುವ ಜನತೆಗೆ ಪ್ರಾಶಸ್ತ್ಯ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ‌ ಭರವಸೆ ನೀಡಿದರು.
ಗೂಗಲ್​ ಶಾಕ್​! ಇನ್ಮುಂದೆ ಈ ಸ್ಮಾರ್ಟ್​ಫೋನ್​ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆ್ಯಪ್​ಗಳ ಕಾರ್ಯ ಸ್ಥಗಿತ ​

5 ಸಾವಿರ ಅಕ್ರಮ ಕಟ್ಟಡ ಶೀಘ್ರ ನೆಲಸಮ: ಸರ್ಕಾರಿ ಜಮೀನು ಒತ್ತುವರಿ; ಬಿಬಿಎಂಪಿ, ಬಿಡಿಎ, ಕಂದಾಯ ಇಲಾಖೆಗಳ ಕಾರ್ಯಾಚರಣೆ

ಜೋರಾಗಿದೆ ಡೆಪ್ಯುಟೇಶನ್ ದಂಧೆ: ಲಾಕ್​ಡೌನ್​ನಲ್ಲೂ 220ಕ್ಕೂ ಹೆಚ್ಚು ಸಿಬ್ಬಂದಿ ಎತ್ತಂಗಡಿ; ಆರ್​ಟಿಒಗಳಲ್ಲೇ ಅತಿ ಹೆಚ್ಚು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − one =
Remember me
