ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿಚಾರ ಮುಂದಿಟ್ಟುಕೊಂಡು ಮೆಟ್ರೋ ಆದಾಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಚುನಾವಣಾ ಆಯೋಗದಿಂದ ದೇಶಾದ್ಯಂತ ಈವರೆಗೆ 9,000 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.
“ಮೆಟ್ರೋ ಆದಾಯ ಹಾಗೂ ಶಕ್ತಿ ಯೋಜನೆ ಬಗ್ಗೆ ಪ್ರಧಾನಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಮೆಟ್ರೋ 130 ಕೋಟಿ ರೂ. ಆದಾಯ ಗಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಶೇ.30 ರಷ್ಟು ಏರಿಕೆ ಕಂಡಿದೆ. ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ. ಶಕ್ತಿ ಯೋಜನೆ ಕರ್ನಾಟಕದಾದ್ಯಂತ ಜಾರಿ ಮಾಡಲಾಗಿದೆ. ನಾವು ಬಡವರ ಬಗ್ಗೆ ಆಲೋಚಿಸಿ ಈ ಯೋಜನೆ ಜಾರಿ ಮಾಡಿದ್ದೇವೆ ಹೇಳಿದರು.
ನಮ್ಮ ಮೆಟ್ರೋದಲ್ಲಿ ಶೇ. 30 ರಷ್ಟು ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಹೆಚ್ಚಾಗಿದೆ. ಮೆಟ್ರೋದಲ್ಲಿ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಪಾಲುದಾರರು. ಆದರೂ ಪ್ರಧಾನಮಂತ್ರಿಗಳಿಗೆ ಈ ವಿಚಾರವಾಗಿ ಮಾಹಿತಿ ಕೊರತೆ ಇದೆ. ಯಾರೋ ಅವರಿಗೆ ತಪ್ಪು ಮಾಹಿತಿ ನೀಡಿದಂತಿದೆ ಎಂದು ಟಾಂಗ್ ನೀಡಿದರು.
ನಾವು ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದರೂ ಕೆಎಸ್ಆರ್ ಟಿಸಿ ಹಾಗೂ ಮೆಟ್ರೋ ಸಂಸ್ಥೆಗಳನ್ನು ಸಮರ್ಥವಾಗಿ ನಡೆಸುತ್ತಿದ್ದೇವೆ. ಪ್ರಧಾನಮಂತ್ರಿಗಳಿಗೆ ಮಾಧ್ಯಮಗಳ ಮೂಲಕ ಈ ಮಾಹಿತಿ ನೀಡಲು ಬಯಸುತ್ತೇನೆ. ನಮ್ಮ ಶಕ್ತಿ ಯೋಜನೆ ಬಗ್ಗೆ ಬೇರೆ ರಾಜ್ಯದವರು ಬಂದು ಮಾಹಿತಿ ಪಡೆಯುತ್ತಿದ್ದಾರೆ. ಈ ಯೋಜನೆ ಜನರಿಗೆ ಅನುಕೂಲ ತಂದಿದೆ, ಅವರ ವಿಶ್ವಾಸ ಗಳಿಸಿದೆ. ದಿನನಿತ್ಯ ರಾಜ್ಯದಲ್ಲಿ ಮಹಿಳೆಯರು 60 ಲಕ್ಷ ಟ್ರಿಪ್ ನಷ್ಟು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರು ಈ ಯೋಜನೆಯಿಂದ ತೃಪ್ತರಾಗಿ ಸಂತೋಷದಿಂದ ಪ್ರಯಾಣ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
“ಉತ್ತರ ಭಾರತದ ರಾಜ್ಯಗಳಲ್ಲೂ ಚುನಾವಣೆ ಉತ್ತಮವಾಗಿ ನಡೆಯುತ್ತಿದ್ದು ಜನ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳ ಆಸುಪಾಸು ಕ್ಷೇತ್ರಗಳನ್ನು ಗೆಲ್ಲಲಿದೆ. ನಮ್ಮ ಗ್ಯಾರಂಟಿ ಏಟು ಏನು ಎಂದು ಗೊತ್ತಿಲ್ಲ. ಬಿಜೆಪಿಯವರು ನಮ್ಮ ಗ್ಯಾರಂಟಿ ನೋಡಿ ಗಾಬರಿಯಾಗಿದ್ದಾರೆ ಎಂದರು.
ಆಮ್ ಆದ್ಮಿ ನಾಯಕರೊಂದಿಗೆ ನಾಳೆ ಬಿಜೆಪಿ ಕಚೇರಿಗೆ ಬರ್ತೀವಿ, ಎಲ್ಲರನ್ನೂ ಬಂಧಿಸಿ; ಕೇಜ್ರಿವಾಲ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven − seven =
Remember me
