ಬೆಂಗಳೂರು:ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು’ಗೆ ಇಂದು(ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ “ಭಾರತ್ ಗೌರವ್ ಕಾಶಿ ದರ್ಶನ್” ರೈಲುಗಳಿಗೂ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ, ವಿಮಾನ ನಿಲ್ದಾಣದ ಟರ್ಮಿನಲ್​-2 ಉದ್ಘಾಟನೆ ಸೇರಿದಂತೆ ವಿವಿ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲಿಗೆ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್​ ಶೋ ಮೂಲಕ ಮೆಜೆಸ್ಟಿಕ್​ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ವಂದೇ ಭಾರತ್​ ಎಕ್ಸ್​ಪ್ರಸ್​ರೈಲು ಮತ್ತು ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಚಾಲನೆ ನೀಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕಾಮದೇನು ಸ್ಮರಣಿಕೆ ನೀಡಿದರು. ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಕುಮಾರ್ ಕೂಡ ಹಾಜರಿದ್ದರು.
ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ದೇಶದ ಅತೀ ವೇಗದ ರೈಲು. ಬೆಂಗಳೂರು-ಮೈಸೂರು ಹಾಗೂ ಚೆನ್ನೈ ನಡುವೆ ಸಂಚರಿಸಲಿದೆ. 1,128 ಆಸನ, 16 ಕೋಚ್​ ಸೇರಿ 384 ಮೀ. ಉದ್ದದ ಟ್ರೈನ್​ ಇದು.
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದತ್ತ ಪ್ರಧಾನಿ: ಹರ ಹರ ಮಹಾದೇವ… ಎನ್ನುತ್ತಾ ಘೋಷಣೆ ಕೂಗಿದ ಅಭಿಮಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
