ಬೆಂಗಳೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನವಾದ ಡಿ.25ರಂದು ರಾಷ್ಟ್ರೀಯ ಕೃಷಿಕರ ದಿನವನ್ನಾಗಿ ಆಚರಿಸಲಿದ್ದು, ಅಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿ, ಕೃಷಿ ನೀತಿಗಳ ಬಗ್ಗೆ ವಿವರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ರಾಯಲ್ ಆರ್ಕಿಡ್ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ರಾಜ್ಯ ಸಮಿತಿ ಪದಾಧಿಕಾರಿಗಳ ಸಭೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರಲ್ಲಿ ಈ ಜಾಗೃತಿ ಮೂಡಿಸಲೆಂದು ರಾಜ್ಯದಲ್ಲಿ ಪ್ರತಿ ಮನೆಗೆ ತೆರಳಿ ಕೃಷಿ ನೀತಿಗಳ ಮಾಹಿತಿ ನೀಡಲು ನಿರ್ಧರಿಸಿದ್ದು, ಡಿ.25ರೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಇದನ್ನೂ ಓದಿ:ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದ ಬಯಲಾಯ್ತು ಮುಚ್ಚಿಟ್ಟಿದ್ದ ರಹಸ್ಯ: ಮರುಗಳಿಗೆಯಲ್ಲೇ ಮಹಿಳೆ ನೇಣಿಗೆ ಶರಣು!
ಜನ‌ಪ್ರತಿನಿಧಿ ಸಮಾವೇಶ :ಮುಂದಿನ 3 ತಿಂಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬರಲಿದ್ದು, ಪಕ್ಷ ಸಂಘಟನಾತ್ಮಕವಾಗಿ ಸಜ್ಜಾಗಬೇಕಿದೆ. ಈ ನಿಟ್ಟಿನಲ್ಲಿ ಜ.8 ರಿಂದ 11ರವರೆಗೆ ಜನಪ್ರತಿನಿಧಿಗಳ ಸಮಾವೇಶ ಪ್ರತಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಸಂಸದ ಪಿ.ಸಿ.ಮೋಹನ್, ಶಾಸಕರಾದ ಎಸ್.ರಘು, ಮುನಿರತ್ನ ಇದ್ದರು.
ಸ್ನೇಹಿತನ ಪೀಸ್ ಪೀಸ್​ ಮಾಡಿ ಎರಡು ಸೂಟ್​ಕೇಸ್​ನಲ್ಲಿ ದೇಹ ತುಂಬಿದ ದಂಪತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 4 =
Remember me
