ಮೈಸೂರು:ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದು, ಏಪ್ರಿಲ್ 8 ಹಾಗೂ 9 ಎರಡು ದಿನಗಳು ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳುವ ಪಟ್ಟಿ ದಿಗ್ವಿಜಯ ನ್ಯೂಸ್​​ಗೆ ಲಭ್ಯವಾಗಿದೆ.
ಹುಲಿ ಸಂರಕ್ಷಣಾ ಯೋಜನೆಗೆ 50 ವರ್ಷ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್ 8ರ ಸಂಜೆ 8ಗಂಟೆಗೆ ಮೈಸೂರಿಗೆ ಬಂದಿಳಿಯಲಿದ್ದಾರೆ. ಬಳಿಕ ರ್ಯಾಡಿಷನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ:ಏಳು ದಿನದಲ್ಲಿ ಬೆಂಗಳೂರಿನಿಂದ ಒಡಿಶಾ; ಸಾವಿರ ಕಿ.ಮೀ ಕ್ರಮಿಸಿದರು ಸಂಬಳ ಸಿಗದ ಕಾರ್ಮಿಕರು!
ಏಪ್ರಿಲ್ 9ರ ಬೆಳಗ್ಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬಂಡಿಪುರಕ್ಕೆ ಪಯಣ ಬೆಳೆಸಲಿದ್ದಾರೆ. ಬೆಳಗ್ಗೆ 7.30ರ ಸುಮಾರಿಗೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿ ಮಾಡಲಿದ್ದಾರೆ. 10 ಗಂಟೆ ಸುಮಾರಿಗೆ ನೀಲಗಿರೀಸ್‌‌ಗೆ ಭೇಟಿ ನೀಡಲಿದ್ದು, ಬೆಳಗ್ಗೆ 10.30ಕ್ಕೆ ಮೈಸೂರಿಗೆ ವಾಪಸ್ ಆಗಲಿದ್ದಾರೆ.
ಇದಾದ ಬಳಿಕ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ಭವನಕ್ಕೆ ಆಗಮಿಸುವ ಪ್ರಧಾನಿ ಮೋದಿ 11 ಗಂಟೆಗೆ ಹುಲಿ ಯೋಜನೆ 50ನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ದೆಹಲಿಗೆ ಪಯಣ ಬೆಳೆಸಲಿದ್ದಾರೆ.(ಏಜೆನ್ಸೀಸ್​)
ಕೊನೆಗೂ Instagram ಖಾತೆ ತೆರೆದ ವಿಜಯ್​: 1 ದಿನದಲ್ಲಿ ಗಳಿಸಿದ ಫಾಲೋವರ್ಸ್​ ಸಂಖ್ಯೆ ಹುಬ್ಬೇರಿಸುವಂತಿದೆ!

ಆಂಟಿ ಎಂದು ಕರೆದರೆ ನಿಮಗೇಕೆ ಕೋಪ ಬರುತ್ತೆ? ಅಭಿಮಾನಿ ಪ್ರಶ್ನೆಗೆ ಅನಸೂಯ ಕೊಟ್ಟ ಉತ್ತರ ವೈರಲ್​

‘ಚಾಕೊಲೇಟ್ ಬಾಯ್’ ಆದ ‘ಫಿಸಿಕ್ಸ್ ಟೀಚರ್’; ಸುಮುಖನ ಹೊಸ ಚಿತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + two =
Remember me
