ಬೆಂಗಳೂರು: ಜನಜೀವನ ಇನ್ನಷ್ಟು ಸುಗಮವಾಗಲು ಲಾಕ್​ಡೌನ್ ಸಂಪೂರ್ಣ ತೆರವು ಮಾಡುವಂತೆ ಬುಧವಾರ ನಡೆಯುವ ವಿಡಿಯೋ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಚಾಮರಾಜಪೇಟೆಯ ಶಂಕರಮಠದಲ್ಲಿ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಲಾಕ್​ಡೌನ್ ಅಗತ್ಯವೇನು ಇಲ್ಲ ಎಂದು ಅಭಿಪ್ರಾಯಪಟ್ಟರು. ಆರ್ಥಿಕ ಸುಧಾರಣೆಯಾಗುವ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದ್ದರಿಂದ ಲಾಕ್​ಡೌನ್ ಸಂಪೂರ್ಣ ತೆರವು ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರಧಾನಿ ಅವರಿಗೆ ಮನವರಿಕೆ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ರೈತ ನೆಮ್ಮದಿಯಿಂದ ಇರಬೇಕೆಂಬ ಕಾರಣಕ್ಕೆ ಪ್ರಧಾನಿ ಸಮ್ಮಾನ್ ನಿಧಿಗೆ ಎರಡನೇ ಕಂತು ಹಣ ಬಿಡುಗಡೆ ಮಾಡಲಾಗಿದೆ. 50 ಲಕ್ಷ ರೈತರಿಗೆ ತಲಾ ಒಂದು ಸಾವಿರ ರೂ. ಸಿಗುವಂತಾಗಲಿ ಎಂಬ ಕಾರಣಕ್ಕೆ 1000 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಮುಂಗಾರು ಹಂಗಾಮಿಗೆ ರೈತರಿಗೆ ಹಣದ ಅಗತ್ಯತೆ ಇರುತ್ತದೆ ಎಂದು ಹೇಳಿದರು. ಮೇಲ್ಮನೆ ಚುನಾವಣೆಗೆ ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಕೋರ್ ಕಮಿಟಿಯಲ್ಲಿ ಕೆಲವೊಂದು ಹೆಸರು ಚರ್ಚೆ ಮಾಡಿ ಶಿಫಾರಸು ಮಾಡಿದ್ದೇವೆ ಎಂದರು.
ಇದನ್ನೂ ಓದಿ:ಕೋವಿಡ್ ಕಂಟಕ: ಐದನೆಯ ಆರ್ಥಿಕ ಹಿಂಜರಿತ ಎದುರಿಸುತ್ತಿದೆ ಭಾರತ
ಧನ್ವಂತರಿ ಯಾಗದಲ್ಲಿ ಮುಖ್ಯಮಂತ್ರಿ ಭಾಗಿ:ಕರೊನಾ ನಿಯಂತ್ರಣಕ್ಕಾಗಿ ಚಾಮರಾಜಪೇಟೆಯ ಶಂಕರಮಠದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ವಿವೇಕಾನಂದ ಸೇವಾ ಸಮಿತಿ ಧನ್ವಂತರಿ ಯಾಗ ಹಮ್ಮಿಕೊಂಡಿದ್ದವು. ಅದರಲ್ಲಿ ಭಾಗವಹಿಸಿ ಸೋಂಕು ನಿಯಂತ್ರಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ. ನಿರೀಕ್ಷೆಗೂ ಮೀರಿ ಕರೊನಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅತ್ಯಂತ ಹೆಚ್ಚಿನ ಪರೀಕ್ಷೆಗಳು ನಡೆಯುತ್ತಿರುವುದೇ ರಾಜ್ಯದಲ್ಲಿ ಎಂದು ಯಡಿಯೂರಪ್ಪ ತಿಳಿಸಿದರು.
ಚೀನಾ-ಭಾರತ ಸಂಘರ್ಷ: ಭಾರತದ 20 ಯೋಧರು ಹುತಾತ್ಮ, 40ಕ್ಕೂ ಹೆಚ್ಚು ಚೀನಾ ಯೋಧರೂ ಹತರಾಗಿರುವ ಶಂಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
