ಬೆಂಗಳೂರು:ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ರೌಡಿ ಸೇರಿ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ೩ ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇಮ್ರಾನ್ ಬಾಷಾ, ಶಹಬಾಜ್ ಖಾನ್, ರೌಡಿ ಸೈಯದ್ ಯಾರಬ್ ಬಂಧಿತರು. ಆರೋಪಿಗಳಿಂದ ೨೫ ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ೨೨ ಎಲ್.ಎಸ್.ಡಿ ಸ್ಟ್ರೀಪ್ಸ್, ೧ ಕೆ.ಜಿ ತೂಕದ ಗಾಂಜಾ ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೊಲೆ ಪ್ರಕರಣದ ಆರೋಪಿಯಾಗಿರುವ ಸೈಯದ್ ಯಾರಬ್ ಅದೇ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಈತ ತನ್ನ ಸಹಚರರ ಗುಂಪು ಕಟ್ಟಿಕೊಂಡು ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ರೌಡಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿ ತನ್ನ ಏರಿಯಾದಲ್ಲಿ ಅಪ್ರಾಪ್ತ ಯುವಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ.
ಈ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡುತ್ತಿದ್ದ ಈತನ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಜೆ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ರೌಡಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣದ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + three =
Remember me
