ಬೆಂಗಳೂರು:ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೇಯ ಕೃತ್ಯ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, 26 ವರ್ಷದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಮೂಲದ ಮಹಿಳೆ ಕಾಮಾಕ್ಷಿಪಾಳ್ಯದಲ್ಲಿ ಮೂರೂವರೆ ವರ್ಷದ ಮಗಳ ಜತೆಗೆ ನೆಲೆಸಿದ್ದಳು. ಗಂಡನಿಂದ ದೂರವಾಗಿದ್ದ ಈ ಮಹಿಳೆಗೆ ಆರೋಪಿಯ ಪರಿಚಯವಾಗಿ ಅನೈತಿಕ ಸಂಬಂಧ ಏರ್ಪಟ್ಟಿತ್ತು. ಹೀಗಾಗಿ ಆತ ಮಹಿಳೆಯ ಮನೆಯಲ್ಲೇ ನೆಲೆಸಿದ್ದ. ಮಹಿಳೆ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾಳೆ. ಆರೋಪಿ ಮದ್ಯದ ವ್ಯಸನಿಯಾಗಿದ್ದು, ನಿರ್ದಿಷ್ಟ ಕೆಲಸವಿಲ್ಲ. ಸೋಮವಾರ ಮನೆಯಲ್ಲೇ ಇದ್ದ ಆರೋಪಿ ಸಂಜೆ ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು, ಬಳಿಕ ಆ ಬಾಲಕಿ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆ.
ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿ ಮಹಿಳೆ ಮನೆಗೆ ಬಂದಾಗ, ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಇಷ್ಟಾದರೂ ಆರೋಪಿ ತನಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸಿದ್ದಾನೆ. ಮಹಿಳೆಯ ಜತೆಗೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸ್ಥಳೀಯರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದು ಗಲಾಟೆ ಬಗ್ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಪೊಲೀಸರು ಮಹಿಳೆಯ ಮನೆ ಬಳಿ ಬಂದಾಗ ಬಾಲಕಿ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ. ಬಳಿಕ ಪರಿಶೀಲನೆ ಮಾಡಿದಾಗ ಬಾಲಕಿ ಮುಖದ ಮೇಲೆ ಗಾಯಗಳು ಕಂಡು ಬಂದಿವೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ಪಮಾಡಿದಾಗ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ, ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?
ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − four =
Remember me
