ಉತ್ತರಕನ್ನಡ:ಹೆಂಡತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದವ ಕೊನೆಗೂ ಅರಣ್ಯ ಪ್ರದೇಶವೊಂದರಲ್ಲಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಹೆಗ್ಗೋಡ್ಮನೆ ಎಂಬಲ್ಲಿ ಈ ಕೊಲೆ ನಡೆದಿದೆ. ಇಲ್ಲಿನ ನಿವಾಸಿ ಮಂಜುಳಾ (46) ಕೊಲೆಯಾದ ಮಹಿಳೆ. ಈಕೆಯ ಪತಿ ಮಂಜುನಾಥ ಚನ್ನಯ್ಯ ಕೊಲೆ ಆರೋಪಿ.
ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತೆರಳಿ ಕತ್ತಿಯಿಂದ ಹೆಂಡತಿಯನ್ನು ಕಡಿದು ಹಾಕಿದ್ದಾನೆ. ಹೊಡೆತದ ತೀವ್ರತೆಗೆ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಳು. ಕೊಲೆ ಬಳಿಕ ಪರಾರಿಯಾಗಿ ಪಕ್ಕದ ಅರಣ್ಯ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿದ್ಧಾಪುರ ಠಾಣಾ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 18 =
Remember me
