ವಿಜಯನಗರ:ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರ ಬಂಧನವಾಗಿದ್ದು, ಒಟ್ಟು ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಇದೀಗ ಪೊಲೀಸರು ಆರೋಪಿಯ ತಂದೆ-ತಾಯಿಯನ್ನೂ ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಜುಲೈ 21ರಂದು ಈ ಕೊಲೆ ನಡೆದಿತ್ತು. ಭೋಜರಾಜ್ ಎಂಬಾತ ತಾನು ಪ್ರೀತಿಸುತ್ತಿದ್ದ ನಿರ್ಮಲಾ (23) ಎಂಬಾಕೆಯನ್ನು ಮದುವೆಯಾಗಲು ಆಗಲಿಲ್ಲ ಎಂಬ ಹತಾಶೆಯಿಂದ ಅವಳ ಕೊಲೆ ಮಾಡಿ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಿದ್ದ. ಪೊಲೀಸರು ಅಂದು ಆರೋಪಿಯನ್ನು ಬಂಧಿಸಿದ್ದು, ಈಗ ಆತನ ತಂದೆ-ತಾಯಿಯನ್ನೂ ಬಂಧಿಸಿದ್ದಾರೆ.
ಇದನ್ನೂ ಓದಿ:ಪ್ರೇಯಸಿಯ ತಲೆ ಕಡಿದು ಠಾಣೆಗೆ ತಂದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ದುರಂತ, ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ!
ಆರೋಪಿ ಭೋಜರಾಜನ ತಂದೆ ಬಸಣ್ಣ ಮತ್ತು ತಾಯಿ ಕರಿಬಸಮ್ಮನನ್ನು ಪೊಲೀಸರು ಬಂಧಿಸಿದ್ದಾರೆ. ಬಸಣ್ಣನನ್ನು ಕೊಲೆಗೆ ಸಹಕರಿಸಿದ್ದ ಆರೋಪದ ಮೇಲೆ ಹಾಗೂ ಕರಿಬಸಮ್ಮನನ್ನು ಮಗನಿಗೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆಗೆ ಮದುವೆ ಮಾಡಿಸಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಇಬ್ಬರ ವಿರುದ್ಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪ್ರೇಯಸಿಯ ರುಂಡ ಕಡಿದ ಪ್ರೇಮಿ; ಕೊಲೆಗಾರನನ್ನು ತನಗೊಪ್ಪಿಸಿ ಎಂದು ಸ್ಟೇಷನ್​ ಮುಂದೆ ರೊಚ್ಚಿಗೆದ್ದ ಅಣ್ಣ..
ನಿರ್ಮಲಾ ಜತೆ ಮದುವೆಯಾಗಲು ಅವಳ ಮನೆಯವರು ಒಪ್ಪಲಿಲ್ಲ ಎಂಬ ಕಾರಣಕ್ಕೆ ಭೋಜರಾಜ ಎರಡು ತಿಂಗಳ ಹಿಂದೆ ಬೇರೊಬ್ಬಳನ್ನು ಮದುವೆಯಾಗಿದ್ದ. ಆದರೆ ನಿರ್ಮಲಾ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ ಈತ, ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಾಗ ಈಕೆಯ ಕೊಲೆ ಮಾಡಿ ರುಂಡ ಖಾನಾಹೊಸಹಳ್ಳಿ ಪೊಲೀಸ್​ ಠಾಣೆಗೆ ಹಿಡಿದುಕೊಂಡು ಬಂದಿದ್ದ.
ಅಪಾರ್ಟ್​ಮೆಂಟ್​​ನ 2ನೇ ಮಹಡಿಯಿಂದ ಬಿದ್ದು ಬಾಲಕ ಸಾವು..

ಬುಲೆಟ್​​ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
