ಉತ್ತರಕನ್ನಡ:ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಎರಡು ದಿನಗಳ ಹಿಂದೆ ಒಂದೇ ಮನೆಯ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಅಪ್ಪ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಶಿವಮೊಗ್ಗದಲ್ಲಿ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ:ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?
ವಿನಯ್ ಭಟ್ ಹಾಗೂ ಈತನ ತಂದೆ ಶ್ರೀಧರ್ ಭಟ್ ಬಂಧಿತ ಆರೋಪಿಗಳು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಫೆ. 24ರಂದು ಈ ಕೊಲೆಗಳು ನಡೆದಿದ್ದವು. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಹಾಕಲಾಗಿತ್ತು. ಬಳಿಕ ಆರೋಪಿಗಳು ಪರಾರಿಯಾಗಿ ತಲೆಮರೆಸಿಕೊಂಡಿದ್ದರು.
ಇದನ್ನೂ ಓದಿ:ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು?
ಆಸ್ತಿ ವಿಚಾರವಾಗಿ ಈ ಕೊಲೆಗಳು ನಡೆದಿದ್ದವು. ಆರೋಪಿ ವಿನಯ್ ಸಹೋದರಿ ಶಂಭು ಭಟ್ ಅವರ ಹಿರಿಯ ಸೊಸೆ. ಈಕೆಯ ಪತಿಯ ಮರಣದ ಬಳಿಕ ಆಸ್ತಿಗಾಗಿ ಜಗಳಗಳಾಗಿದ್ದು, ಕೊನೆಗೆ ಆಕೆಯ ಪಾಲಿಗೆ ಒಂದಷ್ಟು ಆಸ್ತಿ ಹಂಚಿಕೆ ಮಾಡಲಾಗಿತ್ತು. ಅದಾಗ್ಯೂ ಅದನ್ನು ನೋಡಿಕೊಳ್ಳುತ್ತಿದ್ದ ವಿನಯ್ ಮತ್ತು ಶ್ರೀಧರ್ ಈ ಕೊಲೆಗಳನ್ನು ಮಾಡಿದ್ದು, ಪರಾರಿಯಾಗಿದ್ದರು. ಇಂದು ಸಿಕ್ಕಿ ಬಿದ್ದಿರುವ ಇವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 3 =
Remember me
