ಉತ್ತರಕನ್ನಡ:ದೇವಿಮನೆ ಘಟ್ಟ ಪ್ರದೇಶದ ಕಾಡಿನಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆ ಸಂಬಂಧ ಐವರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಆರೋಪಿಗಳ ಪೈಕಿ ಸಾವಿಗೀಡಾದ ಯುವತಿ ಮೂವರು ಚಿಕ್ಕಮ್ಮಂದಿರೂ ಇದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಪ್ರದೇಶದಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು ಆಕೆಯನ್ನು ಶಿಗ್ಗಾವಿ ಮೂಲದ ತನುಜಾ (26) ಎಂದು ಪತ್ತೆ ಹಚ್ಚಿದ್ದಲ್ಲದೆ, ಆರೋಪಿಗಳನ್ನೂ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಇದನ್ನೂ ಓದಿ:ಹಿರಿಯ ನಾಗರಿಕರಿಗಿನ್ನು ದೇವಸ್ಥಾನದಲ್ಲಿ ನೇರ ದರ್ಶನ ವ್ಯವಸ್ಥೆ!; ಇಲ್ಲಿದೆ ವಿವರ..
ತನುಜಾ ಪತಿಯ ಸಹೋದರ ಮಹೇಶ್, ವಾಹನ ಚಾಲಕ ಅಮಿತ್ ಹಾಗೂ ಆಕೆಯ ಚಿಕ್ಕಮ್ಮಂದಿರಾದ ಗೌರಮ್ಮ, ನೀಲಕ್ಕ, ಕಾವ್ಯ ಬಂಧಿತ ಆರೋಪಿಗಳು. ಉತ್ತರಕನ್ನಡ ಜಿಲ್ಲೆಯ ಕುಮಟಾ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ..: ನಟ ಜಗ್ಗೇಶ್​ಗೆ ‘ಮೇಷ್ಟ್ರ’ ಕನ್ನಡ ಪಾಠ!
ತನುಜಾಳನ್ನು ಜೂ. 16ರಂದು ಹತ್ಯೆ ಮಾಡಿ ದೇವಿಮನೆ ಘಟ್ಟದಲ್ಲಿ ಶವವನ್ನು ಎಸೆಯಲಾಗಿತ್ತು. ಶೀಲ ಶಂಕಿಸಿ ಈ ಕೊಲೆ ಮಾಡಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದು ಬಂದಿದೆ. ಕುತ್ತಿಗೆ ಭಾಗದಲ್ಲಿ ಗಾಯದ ಗುರುತು ಆಧರಿಸಿ ತನಿಖೆ ಕೈಗೊಂಡ ಕುಮಟಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seventeen − 12 =
Remember me
