ಶಿವಮೊಗ್ಗ:ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ಹಾಜರಾಗದ ಕನ್ನಡ ಚಿತ್ರನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ವಿನೋಬಾನಗರ ಠಾಣೆಯ ಪೊಲೀಸರು ಈ ಕ್ರಮವನ್ನು ಜರುಗಿಸಿದ್ದಾರೆ.
ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದರೂ ನಟಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿನೋಬಾನಗರ ಠಾಣೆಯ ಪೊಲೀಸರು ಕನ್ನಡ ಚಿತ್ರನಟಿಯನ್ನು ಇಂದು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಉಷಾ ಎಂಬಾಕೆಯೇ ಬಂಧಿತ ನಟಿ. ಈಕೆಯನ್ನು ಬಂಧಿಸಿರುವ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬವರು ವಂಚನೆ ದೂರು ನೀಡಿದ್ದರು.
ಇದನ್ನೂ ಓದಿ:ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಮಂಜೂರು
ತನ್ನಿಂದ ಹಣ ಪಡೆದ ಉಷಾ ಮರಳಿಸಿಲ್ಲ ಎಂದು ಆರೋಪಿಸಿ ಶರವಣನ್‌ ಶಿವಮೊಗ್ಗ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಗೆ ನಟಿ ಉಷಾ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್‌ ಜಾರಿಗೊಳಿಸಿತ್ತು.
ಈ ಕನ್ನಡದ ‘ಸಲಗ’ ಸಿನಿಮಾದಲ್ಲಿ ಸಹ ಕಲಾವಿದೆಯಾಗಿ ಅಭಿನಯಿಸಿದ್ದರು. ಜತೆಗೆ ಕೆಲವು ಧಾರವಾಹಿಗಳಲ್ಲೂ ನಟಿಸುತ್ತಿದ್ದಾರೆ. ಶರವಣನ್‌ ಕೂಡ ಧಾರವಾಹಿಗಳಲ್ಲಿ ನಟಿಸಿದ್ದರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಮಧ್ಯಂತರ ಜಾಮೀನು:ಬಂಧನವಾದ ಬೆನ್ನಿಗೇ ಶಿವಮೊಗ್ಗದ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶರಿಂದ‌ ನಟಿ ಉಷಾಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಆದರೆ‌ ನಟಿ ನಾಳೆ ಮತ್ತೆ ಜಾಮೀನು ಪಡೆಯಲೇಬೇಕಿದೆ. ಅಲ್ಲಿಯವರೆಗೆ ಮಧ್ಯಂತರ ಜಾಮೀನಿನ ಮೇಲೆ ಹೊರಗಿರಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಸಂಜೆ ನಂತರ ಶಿವಮೊಗ್ಗದ ನ್ಯಾಯಾಧೀಶೆ ಅವರ ಮನೆಗೆ ವಿನೋಬಾನಗರ ಪೊಲೀಸರು ನಟಿ ಉಷಾಳನ್ನು ಹಾಜರು ಪಡಿಸಿದ್ದರು. ನಟಿ ಉಷಾ ಪರವಾಗಿ ನ್ಯಾಯವಾದಿ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
