ಹುಬ್ಬಳ್ಳಿ:ಮೊನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನೂರು ದಾಟಿದ್ದು, ಇದುವರೆಗೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಗಲಭೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು ಕುರಿತು ಮಾಹಿತಿ ನೀಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಈ ವಿಷಯ ತಿಳಿಸಿದ್ದಾರೆ.
ಹುಬ್ಬಳ್ಳಿಯ ಗಲಭೆಗೆ ಸಂಬಂಧಿಸಿದಂತೆ ಇಂದು 15 ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 104ಕ್ಕೆ ತಲುಪಿದೆ. ಅಲ್ಲದೆ ಇಂದು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 12ಕ್ಕೆ ತಲುಪಿದೆ ಎಂದು ಅವರು ತಿಳಿಸಿದ್ದಾರೆ.
ದೇವಸ್ಥಾನ, ಮನೆ ಹಾಗೂ ಪೋಸ್ಟ್​​ ಆಫೀಸ್ ಮೇಲೆ ಕಲ್ಲು ಎಸೆದಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಮುಂದುವರಿಸಿದ್ದೇವೆ ಹಾಗೂ ಬೇರೆ ಕಡೆ ಎಲ್ಲೂ ಗಲಾಟೆ ಆಗದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಅಲ್ಲದೆ ಪೊಲೀಸ್ ವಾಹನದ ಮೇಲೆ ಮೌಲ್ವಿ ಸೇರಿದಂತೆ ಹಲವರು ಹತ್ತಿದ್ದ ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಯಾರೆಲ್ಲ ಗಲಭೆಯಲ್ಲಿ ಭಾಗಿಯಾಗಿದ್ದರು ಎನ್ನುವ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಇನ್ನೊಂದೆಡೆ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಿದ್ದ 89 ಆರೋಪಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹುಬ್ಬಳ್ಳಿಯ ನಾಲ್ಕನೇ ಎಸಿಜೆ, ಜೆಎಂಎಫ್​ಸಿ ನ್ಯಾಯಾಲಯ ಅವರಿಗೆ ಏಪ್ರಿಲ್ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕರ್ನಾಟಕದಲ್ಲಿ ಯುಪಿ ಮಾಡೆಲ್​; ರಾಜ್ಯದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಸಂತರ ಸ್ಪರ್ಧೆ..

ರಾಜ್ಯದಲ್ಲಿ ಇನ್ನೂ 2 ದಿನ ಮಳೆ; ನಾಳೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 1 =
Remember me
