ಬೆಂಗಳೂರು:ಪೊಲೀಸ್ ಠಾಣೆಯಿಂದ ಹೊರಟಿದ್ದ ವ್ಯಕ್ತಿಯೊಬ್ಬ ಕೆಲವೇ ದೂರದಲ್ಲಿ ಸಾವಿಗೀಡಾಗಿದ್ದು, ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ಲಾಕಪ್​ ಡೆತ್ ಎಂಬ ಆರೋಪ ಕೇಳಿಬಂದಿದ್ದರೂ ಬಳಿಕ ವಿಷಯ ಬೇರೆಯದೇ ಎಂಬುದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್​. ಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸಂಜಯ್ ಎಂಬಾತ ಸಾವಿಗೀಡಾದ ವ್ಯಕ್ತಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಾರ್ಥಿಬನ್, ಫಯಾಜ್ ಪಾಷಾ ಹಾಗೂ ಸೈಯದ್ ಖಾಜಾ ಎಂಬವರನ್ನು ಬಂಧಿಸಿದ್ದಾರೆ. ಸೆ. 23ರಂದು ತಮಗೆ ಬಂದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದ ಪೊಲೀಸರು ಸಂಜಯ್​ನನ್ನು ಠಾಣೆಗೆ ಕರೆದುಕೊಂಡು ಬಂದಿದ್ದರು. ಬಳಿಕ ಅಲ್ಲಿಂದ ಹೋಗಿದ್ದ ಸಂಜಯ್​ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದ.
ಮಕ್ಕಳ ಕಳ್ಳ ಎಂದು ಆರೋಪಿಸಿ ಸಂಜಯ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಬಳಿಕ ಸಾರ್ವಜನಿಕರು 112 ನಂಬರ್​ಗೆ ಕರೆ ಮಾಡಿ ದೂರು ನೀಡಿದ್ದರು. ಸ್ಥಳಕ್ಕೆ ಧಾವಿಸಿದ್ದ ರಾಮಮೂರ್ತಿನಗರ ಠಾಣೆ ಪೊಲೀಸರು ಸಂಜಯ್​​ನನ್ನು ವಶಕ್ಕೆ ಪಡೆದಿದ್ದರು. ಅಲ್ಲಿ ಆತ ತನ್ನ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ದೂರು ನೀಡಲು ನಿರಾಕರಿಸಿದ್ದರಿಂದ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದರು. ಠಾಣೆಯಿಂದ ಹೊರಟ ಸಂಜಯ್​ ಬಳಿಕ ಕೆ.ಆರ್.ಪುರ ಐಟಿಐ ಕಾಲನಿ ಬಳಿ ಶವವಾಗಿ ಪತ್ತೆಯಾಗಿದ್ದ. ಈ ಕುರಿತು ರಾಮಮೂರ್ತಿನಗರ ಪೊಲೀಸರ ವಿರುದ್ಧ ಲಾಕಪ್​ ಡೆತ್ ದೂರು ನೀಡಲಾಗಿತ್ತು.
ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದ್ದು, ಹಲ್ಲೆ ನಡೆದಿದ್ದು ವರದಿಯಲ್ಲಿ ಕಂಡುಬಂದಿತ್ತು. ಮತ್ತೊಂದೆಡೆ ಪೊಲೀಸರಿಂದ ಹಲ್ಲೆ ಆಗಿಲ್ಲ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗಿತ್ತು. ಸಂಜಯ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಸದ್ಯ ಕೆ.ಆರ್​. ಪುರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
ವಾಟ್ಸ್​ಆ್ಯಪ್​ ಬಳಕೆ ಅಪಾಯಕಾರಿಯೇ?; ಇಲ್ಲಿದೆ ಆತಂಕಕಾರಿ ಮಾಹಿತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
