ಶಿವಮೊಗ್ಗ:ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳ ಬಂಧನವಾಗಿದ್ದು, ಬಂಧಿತ ಆರೋಪಿಗಳ ಸಂಖ್ಯೆ ಎಂಟಕ್ಕೆ ತಲುಪಿದೆ. ಈ ಮೂಲಕ ಪ್ರಕರಣದ ಕುರಿತು ಮತ್ತಷ್ಟು ಬೆಳವಣಿಗೆಗಳಾಗಿವೆ.
ಇಂದು ಮತ್ತಿಬ್ಬರು ಆರೋಪಿಗಳಾದ ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಅವರನ್ನು ಬಂಧಿಸಲಾಗಿದೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಇಂದು ಮತ್ತೆ ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನಿನ್ನೆ ಮೊಹಮ್ಮದ್ ಖಾಸೀಫ್ ಹಾಗೂ ಸಯ್ಯದ್ ನದೀಂ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಆರೋಪಿಗಳಾದ ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೊಲೆ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರು ಆರೋಪಿಗಳಿಗೆ ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನ ಇರಲಿದೆ.
ಶಾಲೆಗೆ ಹೋಗು ಎಂದಿದ್ದಕ್ಕೆ ಸತ್ತೇ ಹೋದ್ಲು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + four =
Remember me
