ಬೆಂಗಳೂರು:ಇತ್ತೀಚೆಗೆ ಟ್ರಾನ್ಸ್​ಫಾರ್ಮರ್​ ಸ್ಫೋಟಕ್ಕೆ ತಂದೆ-ಮಗಳು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಂಸ್ಥೆಯ ಸಹಾಯಕ ಅಭಿಯಂತರ(ಎಇ) ದಿನೇಶ್, ಕಿರಿಯ ಅಭಿಯಂತರ (ಜೆಇ) ಮಹಾಂತೇಶ್ ಬಂಧಿತ ಆರೋಪಿಗಳು.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಪ್ರಕರಣದಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಾ.23ರಂದು ನಿಶ್ಚಿತಾರ್ಥಕ್ಕೆ ಹಾಲ್ ಬುಕ್ ಮಾಡಿ ಬರುತ್ತಿದ್ದಾಗ ಮಂಗನಹಳ್ಳಿಯಲ್ಲಿ ಮಾರ್ಗಮಧ್ಯೆ ವಿದ್ಯುತ್ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದ್ದು, ಶಿವರಾಜ್ (55) ಹಾಗೂ ಅವರ ಪುತ್ರಿ ಚೈತನ್ಯ (18) ಇಬ್ಬರಿಗೂ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಅಲ್ಲಿ ತಂದೆ ಸಾವಿಗೀಡಾದರು. ಬಳಿಕ ಮರುದಿನ ಪುತ್ರಿ ಕೂಡ ಮೃತಪಟ್ಟಿದ್ದರು.
ಟ್ರಾನ್ಸ್​ಫಾರ್ಮರ್​ನಲ್ಲಿ ಸಮಸ್ಯೆ ಕಂಡುಬಂದಿದೆ ಎಂದು ಸ್ಥಳೀಯರು ಕರೆ ಮಾಡಿ ಹೇಳಿದ್ದರೂ ಬೆಸ್ಕಾಂ ಸಿಬ್ಬಂದಿ ಕ್ರಮಕೈಗೊಂಡಿಲ್ಲ. ಅದಾದ ಸ್ವಲ್ಪ ಹೊತ್ತಿನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತಕ್ಕೆ ಬೆಸ್ಕಾಂ ಅಧಿಕಾರಿ-ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ನಿಶ್ಚಿತಾರ್ಥಕ್ಕೆ ಹಾಲ್​ ಬುಕ್ ಮಾಡಿ ಬರುತ್ತಿದ್ದಾಗ ಭಾರಿ ಸ್ಫೋಟ; ಜೀವನ್ಮರಣ ಹೋರಾಟದಲ್ಲಿ ಅಪ್ಪ-ಮಗಳು

ತಂದೆ ಸ್ಫೋಟಕ್ಕೆ ಬಲಿ; ಅರ್ಧ ಸುಟ್ಟು ಸಾವಿನೊಂದಿಗೆ ಸೆಣಸಾಡುತ್ತಿರುವ ಪುತ್ರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
