ಬೆಂಗಳೂರು:ರಾಜಭವನದಲ್ಲಿ ಬಾಂಬ್​ ಇರಿಸಿರುವುದಾಗಿ ಬೆದರಿಕೆ ಕುರಿತು ಶೋಧ ನಡೆಸಿ ಸ್ಪಷ್ಟನೆ ನೀಡಿರುವ ಪೊಲೀಸ್​ ಅಧಿಕಾರಿಗಳು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.
ಸೋಮವಾರ ತಡರಾತ್ರಿ ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳ (NIA) ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೋರ್ವ ರಾಜಭಾವನದಲ್ಲಿ ಬಾಂಬ್​ ಇರಿಸಿರುವುದಾಗಿ ಬೆದರಿಸಿದ್ದ. ಕೂಡಲೇ ಮಾಹಿತಿ ಪಡೆದ ಅಧಿಕಾರಿಗಳು ರಾಜಭವನ್ಕಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದ್ದರು.
ಇದನ್ನೂ ಓದಿ:ಬಿಗ್​ಬಾಸ್​​ ಸ್ಪರ್ಧಿ ವಿನಯ್​ ಅವರಿಂದ ಅನುಭವಿಸಿರೋ ನೋವು ಅಷ್ಟಿಷ್ಟಲ್ಲಾ; ಗಂಭೀರ ಆರೋಪ ಮಾಡಿದ ಕಿರುತೆರೆ ನಟಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ರಾಜಭವನದಲ್ಲಿ ಯಾವುದೇ ರೀತಿಯ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಪರಿಶೀಲನೆ ನಂತರ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದ್ದು, ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬೆಂಗಳೂರಿನಾದ್ಯಂತ ಸುಮಾರು 44 ಶಾಲೆಗಳಿಗೆ ಅನಾಮಧೇಯ ಇಮೇಲ್‌ಗಳ ಮೂಲಕ ಬಂದಿತ್ತು. ಈ ಘಟನೆ ನಡೆದು 10 ದಿನಗಳು ಕೂಡ ಕಳೆದಿಲ್ಲ, ಅಷ್ಟರೊಳಗೆ ಇದೇ ರೀತಿಯ ಮತ್ತೊಂದು ಬೆದರಿಕೆ ಕರೆ ಮುನ್ನೆಲೆಗೆ ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
