ಕೆ.ಆರ್​.ಪೇಟೆ:ಇಬ್ಬರು ವಿದ್ಯಾಥಿರ್ನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅವರ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹರಿಹರಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಬಂಧಿತ. ಲೈಂಗಿಕ ಕಿರುಕುಳ ನೀಡುತ್ತಿದ್ದ ಸಂಬಂಧ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ಕಸಬಾ ಹೋಬಳಿಯ ಶಿಕ್ಷಕ ಸಂಯೋಜಕಿ ಜಿ.ನೀಲಮಣಿ ಮತ್ತು ಶೀಳನಕೆರೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗವೇಣಿ ಅವರಿಗೆ ದೂರು ನೀಡಿದ್ದರು.ಇದನ್ನೂ ಓದಿರಿಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ
ವಿದ್ಯಾರ್ಥಿನಿಯರ ದೂರಿನ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ಅವರ ಗಮನಕ್ಕೆ ಶಿಕ್ಷಕ ಸಂಯೋಜಕಿ ಜಿ.ನೀಲಮಣಿ ಮತ್ತು ಶೀಳನಕೆರೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗವೇಣಿ ತಂದಿದ್ದರು. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಠಾಣೆಗೆ ಬಿಇಒ ದೂರು ನೀಡಿದ್ದರು. ಪೋಕ್ಸೋ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಹೊಸಕೋಟೆಯಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್​ಐಆರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
