ಬೆಂಗಳೂರು:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಚಾಲುಕ್ಯ ಜಂಕ್ಷನ್‌ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಲುವಾಗಿ ಬೃಹತ್ ಬ್ಯಾನರ್ ಅಳವಡಿಸಲಾಗಿದೆ. ಪಾಲಿಕೆಯಿಂದ ಅನುಮತಿ ಪಡೆದಿಲ್ಲ. ಇದರಿಂದ ಬೆಂಗಳೂರು ನಗರ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿದ್ದರಾಮೋತ್ಸವಕ್ಕೆ ಹೊರಟ ವಾಹನ ಅಪಘಾತ; ಒಂದು ಸಾವು, ನಾಲ್ವರಿಗೆ ಗಂಭೀರ ಗಾಯ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
