ದಕ್ಷಿಣಕನ್ನಡ:ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ಅವರಿಗೆ ತಲವಾರ್ ತೋರಿಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಬೆಳವಣಿಗೆ ನಡೆದಿದ್ದು, ಈ ಕುರಿತು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಇದು ಓವರ್​​ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣವೂ ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದಿರುವ ಅವರು, ಇದು ಕೊಲೆಯತ್ನ ಪ್ರಕರಣವಲ್ಲ ಎಂಬುದಾಗಿಯೂ ತಿಳಿಸಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ಆರೋಪಿಸಿದ್ದು, ಈ ಕುರಿತು ಅವರ ಕಾರು ಚಾಲಕ ನವೀನ್​ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿದ್ದು, ಆ ಬಗ್ಗೆ ಎಸ್​ಪಿ ಮಾಹಿತಿ ನೀಡಿದ್ದಾರೆ.
ಗುರುವಾರ ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್​ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದರು. ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಶಾಸಕ ಹರೀಶ್​ ಪೂಂಜಾ ಅವರ ಕಾರು ಚಾಲಕ ನವೀನ್ ದೂರು ನೀಡಿದ್ದರು.
‘ಕಾಂತಾರ’ ಮತ್ತೊಂದು ದಾಖಲೆ; ಉತ್ತರಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ಕನ್ನಡ ಚಿತ್ರ!

ರಾತ್ರಿ ಇಡೀ ಆಟ ಬೇಕೇ?; ಕಾಲಮಿತಿ ಯಕ್ಷಗಾನ ಸಾಕೇ?

ಫ್ರಿಡ್ಜ್​ ಒಳಗೆ ಕುಕ್ಕರ್​; ಶುರುವಾಯ್ತು ‘ಬಿಸಿಬಿಸಿ’ ಚರ್ಚೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
