ಬೆಂಗಳೂರು:ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸ್ಸೇಜ್​ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಹತ್ಯೆ ಮಾಡಿ ಜೈಲು ಸೇರಿರುವ ನಟ ದರ್ಶನ್​ ಆ್ಯಂಡ್​ ಗ್ಯಾಂಗ್​ಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ದರ್ಶನ್​ ಮತ್ತು ಸಹಚರರು ಜೈಲಿನಲ್ಲಿ ದಿನ ದೂಡುತ್ತಿರುವ ನಡುವೆಯೇ ಬೆಂಗಳೂರು ನಗರ ಪೊಲೀಸ್​ ಆಯುಕ್ತ ದಯಾನಂದ್​ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದಯಾನಂದ್​, ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು, ಅನೇಕ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಶೇ. 70ರಷ್ಟು ವರದಿ ನಮ್ಮ ಕೈ ಸೇರಿವೆ.
ಇದನ್ನೂ ಓದಿ:ಪ್ರತಿಭಟನೆಯಿಂದಲೇ ನಾವು ಕುಸ್ತಿಯಲ್ಲಿ ಪದಕ ಗೆಲ್ಲಲು ಆಗಲಿಲ್ಲ; WFI ಮುಖ್ಯಸ್ಥ ಸಂಜಯ್​ ಸಿಂಗ್​
ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್​ಎಸ್​ಎಲ್ ಗೆ ಕಳಿಸಲಾಗಿದ್ದು ಕೆಲ ದಿನಗಳ ಒಳಗಾಘಿ ವರದಿಗಳು ನಮ್ಮ ಕೈ ಸೇರಲಿವೆ. ವರದಿ ಕೈ ಸೇರಿದ ನಂತರ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆದು ಆ ನಂತರ ನ್ಯಾಯಾಲಯಕ್ಕೆ ಚಾರ್ಜ್​ಶೀಟನ್ನು ಸಲ್ಲಿಸಲಾಗುವುದು. ನಮ್ಮ ಕಡೆಯಿಂದ ತಪ್ಪಾಗುವುದಿಲ್ಲ ಎಂದು ನಗರ ಪೊಲೀಸ್​ ಆಯುಕ್ತ ದಯಾನಂದ್​ ತಿಳಿಸಿದ್ದಾರೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ನಂತರ ಕೋರ್ಟ್​ ವಿಚಾರಣೆ ಆರಂಭಿಸಲಿದೆ. ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿರುವ ಮಾಹಿತಿ ಆಧರಿಸಿ ಆರೋಪಿಯ ಕೈವಾಡ, ಪ್ರಕರಣದ ಗಾಂಭೀರ್ಯತೆಯನ್ನು ಆಧರಿಸಿ ಬೇಲ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fifteen =
Remember me
