ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ತಿ.ನರಸೀಪುರ ತಾಲೂಕಿನ ಅಲಗೂರಿನ ಎ.ಎನ್.ರಂಗು ಎಂಬವರು ಈ ದೂರು ನೀಡಿದ್ದಾರೆ. ನಿವೃತ್ತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ಈ ದೂರನ್ನು ನೀಡಲಾಗಿದೆ.
ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕುಕ್ಕರ್​-ಐರನ್​ ಬಾಕ್ಸ್ ಹಂಚಿರುವ ಕುರಿತು ಸೆ. 15ರಂದು ಮಡಿವಾಳ ಸಮಾಜದ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಹೇಳಿದ್ದರು ಎಂಬುದನ್ನು ಉಲ್ಲೇಖಿಸಿ ರಂಗು ದೂರು ನೀಡಿದ್ದಾರೆ.
ಕಾನೂನು ಉಲ್ಲಂಘಿಸಿ ಮತದಾರರಿಗೆ ಆಮಿಷ ತೋರಿ ಪಕ್ಷಕ್ಕೆ ಮತ ಹಾಕಿಸಿಕೊಂಡಿದ್ದು, ಈ ಖರ್ಚು ವೆಚ್ಚ ಚುನಾವಣೆಯ ಲೆಕ್ಕದಲ್ಲಿ ತೋರಿಸಿಲ್ಲ. ಇದು ಆರ್​ಪಿಐ-1951 ಐಪಿಸಿ ಅನ್ವಯ ಅಪರಾಧವಾಗಿದೆ. ಹೀಗಾಗಿ ಡಾ.ಯತೀಂದ್ರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಎಂದು ಇವರು ದೂರು ನೀಡಿದ್ದು, ಡಿವೈಎಸ್​ಪಿ ಗೋವಿಂದರಾಜ್ ದೂರು ಸ್ವೀಕರಿಸಿದ್ದಾರೆ.
ವಾರವಿಡೀ ಹುಡುಕಾಡಿದರೂ ನಾಪತ್ತೆಯಾದವ ಸಿಗಲಿಲ್ಲ; ಒಂದು ಕಲ್ಲಿಗೆ ಪೂಜೆ ಮಾಡುತ್ತಿದ್ದಂತೆ ಆತ ಮನೆಗೆ ಮರಳಿದ!

ಪ್ರವೇಶ ಇರದಿದ್ದರೂ ಬುಲೆಟ್​ನಲ್ಲಿ ಬಂದ ಯುವತಿಯ ರೋಷಾವೇಶ; ಪೊಲೀಸರಿಗೂ ಡೋಂಟ್ ಕೇರ್, ಕೊನೆಗೂ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 2 =
Remember me
