ಬೆಂಗಳೂರು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾ ರಾಜಧಾನಿ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಈ ಮೂಲಕ ವರ್ಣಸಂಘರ್ಷ ಪೊಲೀಸ್ ಠಾಣೆ ಮೆಟ್ಟಿಲೇರಿದಂತಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂಬ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಈ ದೂರನ್ನು ದಾಖಲಿಸಿದೆ.
ಆರಗ ಜ್ಞಾನೇಂದ್ರ ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ರ್ಯಾಲಿ ಸಂದರ್ಭದಲ್ಲಿ, ‘ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಿನಂತೆ ಇರುತ್ತಾರೆ, ಇದು ಖರ್ಗೆಯವರನ್ನು ನೋಡಿದರೆ ತಿಳಿಯುತ್ತದೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರ ತಲೆ ಮೇಲೆ ಕೂದಲು ಮುಚ್ಚಿಕೊಂಡಿರುವುದರಿಂದ ಕರಕಲಾಗದಂತೆ ಉಳಿದುಕೊಂಡಿರುತ್ತಾರೆ’ ಹೇಳಿರುತ್ತಾರೆ ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..
ಈ ಮೂಲಕ ಆರಗ ಜ್ಞಾನೇಂದ್ರ ಅಸಮಾನತೆ, ವರ್ಣಭೇದ, ಜನಾಂಗೀಯ ಮತ್ತು ಪ್ರಾಂತ್ಯವಾರು ನಿಂದನೆಗಳ ಮೂಲಕ ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರಯತ್ನಿಸಿರುತ್ತಾರೆ. ಅವರನ್ನು ತಕ್ಷಣವೇ ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯದರ್ಶಿ ಎಚ್​.ಎಂ.ರೇಣುಕಾಪ್ರಸನ್ನ ದೂರಿನಲ್ಲಿ ತಿಳಿಸಿದ್ದಾರೆ.
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಇನ್ನು ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆ; ಸಂಸತ್ತಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
