ಬೆಂಗಳೂರು:ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಸೆಕ್ಸ್ ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಪೊಲೀಸರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಫೋನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಸೆಕ್ಸ್ ಸಿ.ಡಿ.ಯಲ್ಲಿದ್ದ ಯುವತಿಯ ಜೊತೆ ಮಾಜಿ ಸಚಿವರು ವಿಡಿಯೋ ಕಾಲ್ ಮಾಡಿ ಮಾತನಾಡಿರುವ ವಿಡಿಯೋ ಕೂಡ ಈ ಮುಂಚೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಯುವತಿಯ ಜತೆಗಿನ ಸಂಪರ್ಕ-ಸಂಬಂಧದ ಕುರಿತು ಪ್ರಶ್ನಿಸಲು ಇತ್ತೀಚೆಗೆ ಎರಡು ಬಾರಿ ಎಸ್‌ಐಟಿ ಪೊಲೀಸರು ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆ ಸಂದರ್ಭದಲ್ಲಿ, ಯುವತಿಯ ಜತೆಗಿನ ವಿಡಿಯೋ ಕಾಲ್ ಕುರಿತು ಪ್ರಶ್ನಿಸಿದಾಗ, ಮಾಜಿ ಸಚಿವರು ಸಮರ್ಪಕ ಉತ್ತರ ನೀಡಿರಲಿಲ್ಲ. ‘‘ನನಗೆ ಮೊಬೈಲ್ ಫೋನ್‌ನಲ್ಲಿ ಇಂಟರ್‌ನೆಟ್ ಅನ್ನೇ ಸರಿಯಾಗಿ ಉಪಯೋಗಿಸಲು ಬರುವುದಿಲ್ಲ… ಇನ್ನು ವಿಡಿಯೋ ಕಾಲ್ ಎಲ್ಲಿಂದ ಮಾಡಲಿ’’ ಎಂದು ಉತ್ತರಿಸಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮೊಬೈಲ್ ಫೋನನ್ನು ವಶಕ್ಕೆ ಪಡೆದಿರುವ ಪೊಲೀಸರು ಅದನ್ನು ಪರಿಶೀಲಿಸಿದ್ದಾರೆ. ನಂತರ ಅದರಲ್ಲಿರುವ ಡೇಟಾ ಕೂಡ ರಿಟ್ರೀವ್ ಮಾಡಲು ಮುಂದಾಗಿದ್ದಾರೆ. ಅಗತ್ಯ ಬಿದ್ದರೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳಿಸಿ ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಸಚಿವ ಸ್ಥಾನ ಕಳೆದುಕೊಂಡಿರುವ ಜಾರಕಿಹೊಳಿ ಅವರಿಗೆ ಪೊಲೀಸರ ಈ ಕ್ರಮ ಮತ್ತಷ್ಟು ಮುಜುಗರ ಉಂಟು ಮಾಡುವ ಸಾಧ್ಯತೆ ಎಂದು ಹೇಳಲಾಗಿದೆ.
ಟೆನಿಸ್ ತಾರೆ ಜೋಕೊವಿಕ್‌ರನ್ನು ಹನಿಟ್ರ್ಯಾಪ್ ಮಾಡಲು ರೂಪದರ್ಶಿಗೆ ಭಾರಿ ಮೊತ್ತದ ಆಮಿಷ!

“ಹಿಂದೆ ಮಹಿಳೆಯರ ಸೊಂಟ ನಂಬರ್ 8 ರಂತೆ ಇರುತ್ತಿತ್ತು, ಈಗ ಡ್ರಮ್ಮಿನಂತಾಗಿದ್ದಾರೆ” ಎಂದ ಡಿಎಂಕೆ ಅಭ್ಯರ್ಥಿ

ಸದನದಲ್ಲಿ ಬಿಸಿಯೇರಿಸಿದ ‘ಸಿಂಗಲ್​ ಹೆಂಡ್ತಿ’… ಸಚಿವರ ವಿರುದ್ಧ ಗರಂ, ವಿಷಾದ ವ್ಯಕ್ತಪಡಿಸಿದ ಸುಧಾಕರ್​

ಉದ್ಯಮಿಗಳ ಸುಲಿಗೆ ಹಿಂದಿದ್ದ ಇಡಿ ಅಧಿಕಾರಿ ಸಿಬಿಐ ಬಲೆಗೆ

ಯುವರತ್ನ ಚಿತ್ರತಂಡಕ್ಕೆ ಸಂಕಷ್ಟ; ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 4 =
Remember me
