ಬಾಗಲಕೋಟೆ:ತಾಲೂಕಿನ ಕಲಾದಗಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಸುರಿದ ಧಾರಾಕಾರ ಮಳೆಯಲ್ಲೂ ಕೊಡೆ ಹಿಡಿದುಕೊಂಡೇ ಡಿಎಆರ್ ಪೇದೆ ಮಾರುತಿ ಭಜಂತ್ರಿ ಅವರು ಕರ್ತವ್ಯ ನಿರ್ವಹಿಸಿದ್ದ ದೃಶ್ಯ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಅವರಿಂದ ಮಾರುತಿ ಭಜಂತ್ರಿಗೆ ಪ್ರಶಂಸನಾ‌ ಪತ್ರವೂ ಸಿಕ್ಕಿದೆ.
ಕರೊನಾ ಹಿನ್ನೆಲೆ ಕಲಾದಗಿ ಗ್ರಾಮದ ಸೀಲ್​ಡೌನ್ ಪ್ರದೇಶದಲ್ಲಿ ನಿನ್ನೆ ಸಂಜೆ ಮಾರುತಿ ಭಜಂತ್ರಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿತ್ತು. ಮಳೆಯಲ್ಲೂ ಜಾಗ ಬಿಟ್ಟು ಕದಲದ ಅವರು ಕೊಡೆ ಹಿಡಿದುಕೊಂಡೇ ಕರ್ತವ್ಯ ನಿರ್ವಹಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಭಾರಿ ಮೆಚ್ಚುಗೆ ಪಡೆದಿತ್ತು.
ಇದನ್ನೂ ಓದಿರಿಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್​ಗೆ ಆಗ್ರಹಿಸಿ ಪ್ರತಿಭಟನೆ
‘ನಿಮ್ಮ ಕರ್ತವ್ಯ ನಿಷ್ಠೆ ಹಾಗೂ ಪ್ರಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಇಲಾಖೆ ಪರವಾಗಿ ನಿಮ್ಮನ್ನು ಪ್ರಶಂಸಿಸುತ್ತಿದ್ದು, ಮುಂದೆಯೂ ಇದೇ ಉತ್ಸಾಹ ಹಾಗೂ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿ ಪೊಲೀಸ್​ ಇಲಾಖೆಗೆ ಕೀರ್ತಿ ತರಲು ಆಶಿಸುತ್ತೇನೆ’ ಎಂದು ಬರೆದಿರುವ ಪ್ರಶಂಸನಾ ಪತ್ರವನ್ನು ಪೇದೆ ಮಾರುತಿ ಭಜಂತ್ರಿ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ನೀಡಿ ಇಂದು(ಗುರುವಾರ) ಗೌರವಿಸಿದರು.
https://www.facebook.com/VVani4U/videos/2197538220371225/?v=2197538220371225
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
