ಚಿಕ್ಕಬಳ್ಳಾಪುರ:ಪೊಲೀಸ್ ಕಾನ್​​ಸ್ಟೆಬಲ್​ವೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಂಡತಿ ಸಾವಿಗೀಡಾದರೆ, ಗಂಡ ಚಿಂತಾಜನಕ ಪರಿಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರದ ಅಣಕನೂರು ಗ್ರಾಮದಲ್ಲಿ ಪೊಲೀಸ್​ ಕಾನ್​ಸ್ಟೆಬಲ್ ಸುರೇಂದ್ರ ಹಾಗೂ ಅವರ ಪತ್ನಿ ಸ್ನೇಹ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಯತ್ನದಲ್ಲಿ ಪತ್ನಿ ಸಾವಿಗೀಡಾಗಿದ್ದು, ಪತಿ ಚಿಂತಾಜನಕ ಸ್ಥಿತಿಗೆ ತಲುಪಿದ್ದು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸುರೇಂದ್ರ ಕಾನ್​ಸ್ಟೆಬಲ್​ ಆಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದರೂ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ಹೊರಬೀಳಬೇಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಸಬ್ ರಿಜಿಸ್ಟ್ರಾರ್​ ಕಚೇರಿ ರಾತ್ರಿ ವರೆಗೂ ಓಪನ್; ಉತ್ತಮ ಸೇವೆ ಒದಗಿಸಲು ಸಮಯ ವಿಸ್ತರಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 18 =
Remember me
