ಹಾವೇರಿ:ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಕಾರನ್ನು ಅಡ್ಡಗಟ್ಟಿ ಕುಳಿತು ಪ್ರತಿಭಟನೆ ನಡೆಸಿದ ಪ್ರಸಂಗವೊಂದು ನಡೆದಿದೆ. ರಾಜ್ಯದಲ್ಲಿ ಪೊಲೀಸ್ ಕಾನ್​​ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಈ ರೀತಿ ಅರುಣ್ ಸಿಂಗ್ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಈ ಪ್ರತಿಭಟನೆ ನಡೆದಿದೆ. ಜಿಲ್ಲಾ ಕೋರ್ ಕಮಿಟಿ ಸಭೆ ಮುಗಿಸಿದ ಬಳಿಕ ಅವರು ಹುಬ್ಬಳ್ಳಿಯತ್ತ ಹೊರಟಿದ್ದ ವೇಳೆ ಕಾರಿಗೆ ಅಡ್ಡಗಟ್ಟಿ ಕುಳಿತ ಪೊಲೀಸ್ ಕಾನ್​ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ತಮ್ಮ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದಿದ್ದಾರೆ.
ಕೃಷಿ ಸಚಿವ ಬಿ‌.ಸಿ‌.ಪಾಟೀಲ್ ಹಾಗೂ ಬಿಜೆಪಿ ಶಾಸಕರು ಬಂದು ಸಮಾಧಾನಪಡಿಸಲು ಯತ್ನಿಸಿದರೂ ಇವರು ಕಾರಿನ ಮುಂಭಾಗದಿಂದ ಎದ್ದೇಳದೆ ಪ್ರತಿಭಟನೆ ಮುಂದುವರಿಸಿದ್ದಾರೆ. ಬಳಿಕ ಕಾರಿನಿಂದ ಇಳಿದು ಬಂದ ಅರುಣ್​ ಸಿಂಗ್​, ಪೊಲೀಸ್ ಕಾನಸ್ಟೇಬಲ್ ಆಕಾಂಕ್ಷಿಗಳ ಸಮಸ್ಯೆ ಏನೆಂದು ಆಲಿಸಿದರು.
ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ ರಾಜ್ಯಗಳಲ್ಲಿ ಇರುವಂತೆ ಪೊಲೀಸ್ ಕಾನ್​ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯನ್ನು ಕರ್ನಾಟಕದಲ್ಲಿ ಗರಿಷ್ಠ 38 ವರ್ಷಗಳವರೆಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಅರುಣ್​ ಸಿಂಗ್, ಈ ಬಗ್ಗೆ ಸಿಎಂ ಗಮನಕ್ಕೆ ತರುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯತ್ತ ತೆರಳಿದರು.
ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು: ನಾಳೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕಾಂತಾರ: 2 ವಾರ ಕಳೆದರೂ ತಗ್ಗದ ಅಬ್ಬರ; ಬಾಲಿವುಡ್ ಚಿತ್ರಗಳೆರಡೂ ತತ್ತರ!

Photos | ಹರ್ಷಿಕಾ ಹೆರಳಲ್ಲಿ ಹರಳು, ಕೊರಳಲ್ಲೂ ಹರಳು?: ವಿಭಿನ್ನ ದಿರಿಸಲ್ಲಿ ನಟಿ ಪೂಣಚ್ಚ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twenty =
Remember me
