ಹೊಸೂರು:ವರ್ಗಾವಣೆ ಸಂಬಂಧ ಪೊಲೀಸ್ ಪೇದೆಯೊಬ್ಬರು ಮೊಬೈಲ್​ಫೋನ್​ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೃಷ್ಣಗಿರಿಯಲ್ಲಿ ಬುಧವಾರ ನಡೆದಿದೆ.
ಮಣಿವೇಲ್ ಎಂಬುವವರು ಕೃಷ್ಣಗಿರಿ ಸಶಸ್ತ್ರ ಪಡೆಯಲ್ಲಿ ಕಾನ್​ಸ್ಟೆಬಲ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಲಾಖೆಯಲ್ಲಿ ಇವರ ಜತೆಗೆ ಕೆಲಸ ನಿರ್ವಹಿಸುತ್ತಿರುವವರನ್ನು ಅವರವರ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡಿದ್ದು, ನನ್ನನ್ನೂ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡುವುದಾಗಿ ಉನ್ನತ ಅಧಿಕಾರಿಗಳು ಭರವಸೆ ನೀಡಿ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಟವರ್ ಏರಿದ್ದರು.
ಇದನ್ನೂ ಓದಿ:ವಿಜ್ಞಾನಿಗಳಿಂದಷ್ಟೇ ಅಲ್ಲ, ಕಾಲಜ್ಞಾನದಲ್ಲೂ ಭೂಕಂಪದ ಎಚ್ಚರಿಕೆ; ದೇಶಕ್ಕೆ ಕಾದಿದ್ಯಾ ಭಾರಿ ಗಂಡಾಂತರ?
ಅಲ್ಲದೆ ಇಲಾಖೆಯಲ್ಲಿ ಅಧಿಕಾರಿಗಳು ಗೌರವ ಕೊಡುತ್ತಿಲ್ಲ, ಹಿರಿಯ ಹಿರಿಯ ಅಧಿಕಾರಿಗಳು ಖುದ್ದಾಗಿ ಬಂದು ಅಹವಾಲು ಆಲಿಸಬೇಕು ಎಂದು ಒತ್ತಾಯಿಸಿದಾಗ ಸ್ಥಳಕ್ಕೆ ಬಂದ ಕೃಷ್ಣಗಿರಿ ಪೊಲೀಸ್ ವರಿಷ್ಠಾಧಿಕಾರಿ ಜತೆ ವಾಗ್ವಾದ ನಡೆಸಿದ್ದಾರೆ. ಖುದ್ದಾಗಿ ವಿಚಾರಣೆ ನಡೆಸುವುದಾಗಿ ಹಿರಿಯ ಅಧಿಕಾರಿ ಭರವಸೆ ನೀಡಿದ ನಂತರ ಒಪ್ಪಿದ ಅವರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಕೆಳಗಿಳಿಸಿದ್ದಾರೆ.
ಇದನ್ನೂ ಓದಿ:296 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದ ದಂಪತಿ-ಮಗ; ಭೂಕಂಪದ 12 ದಿನಗಳ ಬಳಿಕ ಜೀವಂತ ರಕ್ಷಣೆ

ಬರ್ತ್​ಡೇ ಪಾರ್ಟಿಯಲ್ಲಿ ಚಿತ್ರನಟನ ಮೇಲೆ ಹಲ್ಲೆ; ಆಡಿ ಕಾರಿನ ಗಾಜುಗಳು ಧ್ವಂಸ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 1 =
Remember me
