ಬೆಂಗಳೂರು:ಕಳೆದ ವರ್ಷ ನಡೆದ ಕಾನ್​ಸ್ಟೇಬಲ್​ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಒಟ್ಟು 61 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಕಾನ್​ಸ್ಟೇಬಲ್​ಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
2020ರ ನವೆಂಬರ್​ನಲ್ಲಿ ಕಾನ್​ಸ್ಟೇಬಲ್ ಪರೀಕ್ಷೆ ನಡೆದಿತ್ತು. ಅದರಲ್ಲಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಹೆಸರಿನಲ್ಲಿ ಬೇರೆ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದಾಗಿ ವರದಿಯಾಗಿತ್ತು. ಈ ಬಗ್ಗೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ 11 ಪ್ರಕರಣ, ಬೆಳಗಾವಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 21 ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ವರ್ಗಾಹಿಸಿತ್ತು.
ತನಿಖೆ ನಡೆಸಿರುವ ಸಿಐಡಿ ಪೊಲೀಸರು ಗೋಕಾಕ್​ನ ಲಕ್ಷ್ಮಣ್ ಉತ್ತಪ್ಪ ಬಂಡಿ, ಭೀಮಪ್ಪ ಮಹಾದೇವ, ಲಕ್ಷ್ಮಣ ಮುತ್ತಪ್ಪ, ಸೇರಿದಂತೆ 61 ಆರೋಪಿಗಳ ಬಂಧಿಸಿದ್ದಾರೆ. ಅಭ್ಯರ್ಥಿಗಳ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಐವರು ಕಾನ್​ಸ್ಟೇಬಲ್​ಗಳನ್ನು ರಾಜ್ಯ ಸರ್ಕಾರ ಕೆಲಸದಿಂದ ವಜಾ ಮಾಡಿದೆ. 21 ಅಭ್ಯರ್ಥಿಗಳು ಶಾಶ್ವತವಾಗಿ ಯಾವುದೇ‌ ಪರೀಕ್ಷೆ ಬರೆಯದಂತೆ ಡಿಬಾರ್ ಮಾಡಲಾಗಿದೆ.
ಬಂಧಿತ ಆರೋಪಿಗಳು ಅಸಲಿ ಅಭ್ಯರ್ಥಿಯ ಆಧಾರ್ ಕಾರ್ಡ್​ನಲ್ಲಿ ನಕಲಿ ಅಭ್ಯರ್ಥಿಗಳ ಪೋಟೋ ಬದಲಾಯಿಸುತ್ತಿದ್ದರು. ಗೋಕಾಕ್​ನ ಪೋಟೋ ಸ್ಟುಡಿಯೋವೊಂದರಲ್ಲಿ ಈ ಕೆಲಸ ಮಾಡಲಾಗುತ್ತಿತ್ತು. ಅಲ್ಲಿ ಪರೀಕ್ಷೆಯ ನಕಲಿ ದಾಖಲೆ ಸೃಷ್ಟಿಸಿರೋದು ಪತ್ತೆಯಾಗಿದೆ ಎನ್ನಲಾಗಿದೆ. ಬಂಧಿತರಿಂದ 1.54 ಲಕ್ಷ ರೂಪಾಯಿ ನಗದು, ಎರಡು ಕಾರು, ಹಾರ್ಡ್ ಡಿಸ್ಕ್ ಮತ್ತು ಮೊಬೈಲ್ ಪೋನ್​ಗಳನ್ನು ಜಪ್ತಿ ಮಾಡಲಾಗಿದೆ.
ತಾನು ತೊಟ್ಟ ಬಟ್ಟೆಯನ್ನೇ ಮಾರಾಟ ಮಾಡಿ ತಿಂಗಳಿಗೆ 4 ಲಕ್ಷ ರೂಪಾಯಿ ದುಡಿಯುವ ಬೆಡಗಿ

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eighteen =
Remember me
