ಬೆಂಗಳೂರು:ಫ್ರೆಜರ್ ಟೌನ್ ಸಂಚಾರ ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
ಸಿವಿ ರಾಮನ್ ಆಸ್ಪತ್ರೆಯಲ್ಲಿ ಪೇದೆಯು ಕೋವಿಡ್​19 ತಪಾಸಣೆಗೆ ಒಳಗಾಗಿದ್ದರು. ಗುರುವಾರ ರಾತ್ರಿ 11.30ಕ್ಕೆ ವರದಿ ಬಂದಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿ ಪಾಸಿಟಿವ್​ ಬಂದಿದೆ. ಕರ್ತವ್ಯ ನಿರ್ವಹಣೆ ವೇಳೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಮನೆಯಲ್ಲಿ ಪೇದೆ ಒಬ್ಬರೇ ನೆಲೆಸಿದ್ದು, ಕುಟುಂಬಸ್ಥರು ಸ್ವಗ್ರಾಮದಲ್ಲಿ ಇದ್ದಾರೆ.
ಇದನ್ನೂ ಓದಿರಿಕರೊನಾ ಸೋಂಕಿತನ ಅಜ್ಜಿ ಕ್ವಾರಂಟೈನ್​ ಕೇಂದ್ರದಲ್ಲೇ ಆತ್ಮಹತ್ಯೆ
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪೇದೆ ಜತೆ ಮಾರ್ಗಮಧ್ಯೆ ಹೆನ್ನೂರಿನ ಪಿಜಿ (ಪೇಯಿಂಗ್​ ಗೆಸ್ಟ್)ಗೆ ಡ್ರಾಪ್ ತೆಗೆದುಕೊಳ್ಳುತ್ತಿದ್ದ ಮಹಿಳಾ ಪೇದೆಯೊಬ್ಬರನ್ನು ಬಿಬಿಎಂಪಿಯ ಕ್ವಾರಂಟೈನ್ ಕೇಂದ್ರಕ್ಕೆ ಒಳಪಡಿಸಲಾಗಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಇವರ ಸಂಪರ್ಕಕ್ಕೆ ಬಂದವರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಗುರುವಾರ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲೂ ಪೇದೆಯೊಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿತ್ತು.
ಇದನ್ನೂ ಓದಿರಿಸುಳ್ಳು ಹೇಳಿ ಮನೆ ಸೇರಿಕೊಂಡಿದ್ದ ಕುಟುಂಬಕ್ಕೆ ತಡರಾತ್ರಿ ಶಾಕ್​ ಕೊಟ್ಟ ಆಂಬುಲೆನ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
