ಚಿಕ್ಕನಾಯಕನಹಳ್ಳಿ:ಪೊಲೀಸ್ ಕಾನ್​ಸ್ಟೆಬಲ್​ವೊಬ್ಬರ ಹೆಂಡತಿ ಪೊಲೀಸ್​ ವಸತಿಗೃಹದಲ್ಲಿ ನೇಣು ಹಾಕಿಕೊಂಡ ಪ್ರಕರಣ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ವಾಸವಿದ್ದ ಪೊಲೀಸ್ ಕಾನ್​ಸ್ಟೆಬಲ್ ಶಶಿಧರ್ ಎಂಬವರ ಪತ್ನಿ ಲಾವಣ್ಯ (21) ಆತ್ಮಹತ್ಯೆ ಮಾಡಿಕೊಂಡವರು. ಇವರು ಭಾನುವಾರ ಮಧ್ಯಾಹ್ನ ನೇಣು ಹಾಕಿಕೊಂಡಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ; ನೇಣಿಗೆ ಕೊರಳೊಡ್ಡಿದ ಸಹಾಯಕ ಸಬ್​ ಇನ್​​ಸ್ಪೆಕ್ಟರ್!​
ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಲಾವಣ್ಯ-ಶಶಿಧರ್ ದಂಪತಿಗೆ 6 ತಿಂಗಳಿನ ಗಂಡು ಮಗುವಿದೆ. ಈಕೆ ಮೂಲತಃ ಹುಳಿಯಾರು ಹೋಬಳಿ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಬುಕ್ಕಾಪಟ್ಟಣದ ಬಳಿಯ ತುಪ್ಪದಕೋಣದ ಶಶಿಧರ್ ಅವರನ್ನು ಮದುವೆಯಾಗಿದ್ದರು.
ಇದನ್ನೂ ಓದಿ:25 ಸಾವಿರಕ್ಕೂ ಅಧಿಕ ಮಾತ್ರೆ ತಿಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಗುಂಡು ಹೊಡೆದುಕೊಂಡು ಬಿಇಒ ಆತ್ಮಹತ್ಯೆ!
ಶಶಿಧರ್ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂಬ ಮಾಹಿತಿ ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ.
ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದ ತಹಸೀಲ್ದಾರ್​; ಆತ್ಮಹತ್ಯೆ ಮಾಡಿಕೊಂಡ ಚಾಲಕ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
