ಬೆಂಗಳೂರು:ಕರೊನಾ ಸೋಂಕು ತಡೆಯಲು ಪ್ರಾಣವನ್ನೇ ಪಣಕ್ಕಿಟ್ಟರುವ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಮತ್ತು ಇತರ ಸಿಬ್ಬಂದಿಗೆ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆ ಸುತ್ತೋಲೆ ಹೊರಡಿಸಿದೆ. ಮನೆ, ಸಂಸ್ಥೆಗಳಲ್ಲಿ ಕ್ವಾರಂಟೈನ್ ಆಗಿರುವ ವ್ಯಕ್ತಿಗಳ ತಪಾಸಣೆ ಮತ್ತು ಕರೊನಾ ಸೇವೆಗೆ ತೆರುವ ಆರೋಗ್ಯ ಇನ್ನಿತರ ಇಲಾಖೆ ಅಧಿಕಾರಿ, ಸಿಬ್ಬಂದಿ ಮೇಲೆ ಎಲ್ಲೆಡೆ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗುತ್ತಿವೆ. ನಿರ್ಭಯವಾಗಿ ಸೇವೆ ಸಲ್ಲಿಸುವಂತೆ ಅಧಿಕಾರಿ, ಸಿಬ್ಬಂದಿಗೆ ಭದ್ರತೆ ನೀಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಎಡಿಜಿಪಿ ಡಾ. ಅಮರ್ ಕುಮಾರ್ ಪಾಂಡೆ ಅವರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲೆಡೆ ಕರ್ಫ್ಯೂ ಜಾರಿಯಾಗಿದೆ. ಐವರಿಗಿಂತ ಹೆಚ್ಚು ಜನರು ಗುಂಪು ಸೇರಬಾರದು ಎಂಬ ಆದೇಶವಿದೆ. ಆದರೂ ಕಿಡಿಗೇಡಿಗಳು ಗುಂಪು ಸೇರಿ ಆರೋಗ್ಯ ಸೇವಕರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಅಂಥವರನ್ನು ಗುರುತಿಸಿ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ಕಾಯ್ದೆ-2005 ಮತ್ತು ಸ್ಥಳೀಯ ಕಾನೂನು ಅಡಿ ಪ್ರಕರಣ ದಾಖಲಿಸಿ ಬಂಧಿಸಿ. ಆರೋಗ್ಯಾಧಿಕಾರಿಗಳ ಮೇಲೆ ಹಲ್ಲೆ ಮತ್ತು ಗುಂಪು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಈಗಾಗಲೇ ಕೇಂದ್ರ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರ, ಪೊಲೀಸ್ ಪ್ರಧಾನ ಕಚೇರಿಯಿಂದ ಹೊರಡಿಸಿರುವ ಆದೇಶ, ಸುತ್ತೋಲೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಎಲ್ಲ ಕಮಿಷನರ್ ಮತ್ತು ಎಸ್​ಪಿಗಳಿಗೆ ಸೂಚನೆ ನೀಡಿದ್ದಾರೆ.
ಲಾಕ್‌ಡೌನ್ ನಡುವೆಯೂ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ತುರುವೇಕೆರೆ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
