ಬೆಂಗಳೂರು:ಮಂಡ್ಯದ ಧ್ವಜ ವಿಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತಂತೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಈ ಬೆನ್ನಲ್ಲೇ ರಾಜಧಾನಿಯಲ್ಲಿ ಹೈಡ್ರಾಮಾ ಭುಗಿಲೆದ್ದಿದೆ.
#WATCH| Karnataka Police detain BJP workers protesting in Bengaluru over the Mandya flag issue.
Mandya district administration yesterday brought down the Hanuman flag hoisted by the Gram Panchayat Board of Mandya district.https://t.co/7RhJZvEjpKpic.twitter.com/IntYMOKKAA
— ANI (@ANI)January 29, 2024

ನಿನ್ನೆ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯವರು ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಸಿದರು. ಮಂಡ್ಯದ ಕೆರಗೋಡು ಗ್ರಾಮದಲ್ಲಿ ಈ ವಿಚಾರವಾಗಿ ಭಾರೀ ಖಂಡನೆ ವ್ಯಕ್ತವಾಯಿತು. ಇದನ್ನು ಖಂಡಿಸಿದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇಂದು ರಾಜಧಾನಿಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಹಾಕಲಾಗಿದ್ದ 108 ಅಡಿ ಎತ್ತರದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆ ಸದ್ಯ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಇದೀಗ ಮಂಡ್ಯದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿದ್ದಾರೆ. ಜಿಲ್ಲೆಯಲ್ಲಿ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡ ಹಿನ್ನೆಲೆ ಕೆರಗೋಡಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
69ನೇ ಫಿಲ್ಮ್‌ಫೇರ್ ಪ್ರಶಸ್ತಿ 2024: ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
