ಕೋಲಾರ:ಕೋಟ್ಯಂತರ ರೂಪಾಯಿ ವಂಚನೆ ಹಾಗೂ ದಾಖಲೆ ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೋಲಾರದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ನವೀನಾ ಅವರನ್ನು ಕೋಲಾರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಂಚನೆ ಹಾಗೂ ದಾಖಲೆ ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ನವೀನಾ ಮತ್ತು ಇತರ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.
ನಗರಸಭೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಇವರು ತಮ್ಮ ಶಿಕ್ಷಣ ಸಂಸ್ಥೆಗೆ ಬಾಡಿಗೆ ಪಡೆದಿದ್ದರು. ಬಳಿಕ ನಕಲಿ ದಾಖಲೆ ಸೃಷ್ಟಿಸಿ ಜಮೀನು ಲಪಟಾಯಿಸಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ನವೀನಾ ಮತ್ತಿಬ್ಬರ ಮೇಲೆ ಎಫ್​ಐಆರ್​ ದಾಖಲಾಗಿತ್ತು.
ನಗರಸಭೆ ಮಾಜಿ ಉಪಾಧ್ಯಕ್ಷ ಪ್ರವೀಣ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಈ ಮೂವರ ಮೇಲೆ ಎಫ್​ಐಆರ್ ದಾಖಲಾಗಿತ್ತು. ಹೀಗಾಗಿ ತಲೆಮರೆಸಿಕೊಂಡಿದ್ದ ನವೀನಾರನ್ನು ಕೋಲಾರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪರಪುರುಷನ ಮೋಹಕ್ಕಾಗಿ ಗಂಡನನ್ನೇ ಕೊಲ್ಲಿಸಿದ ಪತ್ನಿ; ಶವ ಮೋರಿಗೆ ಹಾಕಿ, ಅಕ್ಕ-ತಮ್ಮ ಅಂತ ಪೊಲೀಸರಿಗೇ ಸುಳ್ಳು ಹೇಳಿದ್ರು!

ಮದ್ವೆ ಆಗದೆ 2 ವರ್ಷ ಒಂದೇ ರೂಮಲ್ಲಿದ್ರು ಬ್ಯೂಟಿಷಿಯನ್​-ಬಾರ್ಬರ್; ಕೊನೆಗೆ ಅವನ ಸಿಟ್ಟಿಗೆ ಅವಳ ಪ್ರಾಣವೇ ಹೋಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − thirteen =
Remember me
