ಕಲಬುರಗಿ:ಅಕ್ರಮ ಮರುಳುಸಾಗಾಣಿಕೆ‌ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದದ್ದು ನೋವಿನ ಸಂಗತಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪ್ರಿಯಾಂಕ್ ಖರ್ಗೆ “ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ ತಂದೆ ಭೀಮು ಚವ್ಹಾಣ (51) ಮೃತಪಟ್ಟಿದ್ದು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು ತನಿಖೆಗೆ ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮೃತ ಪೊಲೀಸ್ ಪೇದೆ ಕುಟುಂಬಕ್ಕೆ ಸಾಂತ್ವನ ಹೇಳಿರುವ ಪ್ರಿಯಾಂಕ್​ ಖರ್ಗೆ ಸರ್ಕಾರದ ವತಿಯಿಂದ ಶೀಘ್ರದಲ್ಲಿಯೇ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅವರು ” ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಆದರೂ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಗಾಣಿಕೆ ವಿರುದ್ದ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ ” ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
