ಮಂಗಳೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪಿ ಆದಿತ್ಯ ರಾವ್ ವಿರುದ್ಧ 700 ಪುಟಗಳ ಆರೋಪ ಪಟ್ಟಿಯನ್ನು ಗುರುವಾರ ಮಂಗಳೂರಿನ ಜೆ.ಎಂ.ಎ್.ಸಿ. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಪ್ರಕರಣದ ತನಿಖೆ ಪ್ರಕ್ರಿಯೆ ಏಪ್ರಿಲ್‌ನಲ್ಲಿ ಮುಕ್ತಾಯಗೊಂಡು ಆರೋಪ ಪಟ್ಟಿ ಸಿದ್ಧವಾಗಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಪಡೆದು ರಾಜ್ಯ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗಳಿಂದ ಪೂರ್ವಾನುಮತಿ ಪತ್ರ ಬಂದಿದೆ ಎಂದು ತನಿಖಾಧಿಕಾರಿಯಾಗಿರುವ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು.ಬೆಳ್ಳಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಡಿಬಿಲ್ಡಿಂಗ್ ಸೀಕ್ರೆಟ್ ಬಿಚ್ಚಿಟ್ಟ 8 ಬಾರಿ ಮಿಸ್ಟರ್ ಒಲಂಪಿಯಾ ರೋನಿ ಕೊಲ್ಮಾನ್…
ಆದಿತ್ಯ ರಾವ್ ಜ. 20ರಂದು ಬೆಳಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್‌ನ ಟಿಕೆಟ್ ಕೌಂಟರ್ ಬಳಿ ಪ್ರಯಾಣಿಕರು ಕುಳಿತು ಕೊಳ್ಳುವ ಕುರ್ಚಿಯಲ್ಲಿ ಸ್ಫೋಟಕಗಳು ಇರುವ ಬ್ಯಾಗ್ ಇರಿಸಿ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿದ್ದ ಆಟೋ ರಿಕ್ಷಾದಲ್ಲಿ ಹೊರ ಹೋಗಿದ್ದ. ಅನುಮಾನಾಸ್ಪದ ಬ್ಯಾಗ್‌ನ್ನು ನಿಲ್ದಾಣದ ಅಧಿಕಾರಿಗಳು ತಜ್ಞರಿಂದ ಪರಿಶೀಲನೆಗೆ ಒಳಪಡಿಸಿದಾಗ ಅದರಲ್ಲಿ ಸ್ಫೋಟಕಗಳಿರುವುದು ಪತ್ತೆಯಾಗಿತ್ತು.
ಅದನ್ನು ಬಳಿಕ ಕೆಂಜಾರಿನ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ನಿಷ್ಕ್ರಿಯಗೊಳಿಸಲಾಗಿತ್ತು. ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಜ.22ರಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಬಳಿಕ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಕರೆತಂದಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಇದನ್ನೂ ಓದಿ:ಪಿಟಿ ಉಷಾಗೆ ಒಲಿಂಪಿಕ್ಸ್ ಪದಕ ಕೈತಪ್ಪಿದಾಗ ಚಿನ್ನ ಗೆದ್ದ ಅಥ್ಲೀಟ್ ಕೂಡ ಅತ್ತಿದ್ದಳು!
ಭಯ ಹುಟ್ಟಿಸುವ ಉದ್ದೇಶ: ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಆರೋಪಿ ದುಷ್ಕೃತ್ಯ ಎಸಗಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಸ್ಫೋಟಗಳನ್ನು ಇರಿಸಿದ್ದ ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ. ಬ್ಯಾಗಿನಲ್ಲಿ ಪತ್ತೆಯಾದ ಸಂಶಯಾಸ್ಪದ ವಸ್ತುಗಳು ಸ್ಫೋಟಕಗಳೇ ಆಗಿವೆ ಎನ್ನುವುದು ಎ್ಎಸ್‌ಎಲ್ ಪರೀಕ್ಷೆಯಿಂದ ಸಾಬೀತಾಗಿರುವುದು ಸೇರಿದಂತೆ ಪ್ರಮುಖ ವಿಷಯಗಳು ಆರೋಪ ಪಟ್ಟಿಯಲ್ಲಿವೆ.
ಆದಿತ್ಯ ರಾವ್‌ನ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಕರೊನಾ ಲಾಕ್‌ಡೌನ್‌ನಿಂದಾಗಿ ಬಾಕಿ ಉಳಿದಿದೆ. ನ್ಯಾಯಾಲಯದ ಅನುಮತಿ ಪಡೆಯಲಾಗಿದ್ದು, ಲಾಕ್‌ಡೌನ್ ಸಂಪೂರ್ಣ ತೆರವಾದ ಬಳಿಕ ಬೆಂಗಳೂರಿಗೆ ಕರೆದೊಯ್ದು ಈ ಪ್ರಕ್ರಿಯೆ ನಡೆಸಲಾಗುವುದು ಎಂದು ತನಿಖಾಧಿಕಾರಿ ಬೆಳ್ಳಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:ಚಿರು ಮೇಲಿನ ಮೇಘನಾ ಪ್ರೀತಿ ಎಂಥದ್ದು ಎಂಬುದಕ್ಕೆ ಆ ಒಂದು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿದೆ ಉತ್ತರ
ಕಣ್ಣೀರು ತರಿಸುವಂತಿದೆ ಪ್ರಜ್ವಲ್​ ಜತೆಗಿನ ಕೊನೇ ವಾಟ್ಸ್​ಆ್ಯಪ್​ ಚಾಟ್​: ಈಡೇರಲೇ ಇಲ್ಲ ಚಿರು ಬಯಕೆ

ಚಿನ್ನದಲ್ಲಿ ಮೂಡಿದೆ ತಾಜ್​ಮಹಲ್! 17 ಗ್ರಾಂ ತೂಕದ ಕಲಾಕೃತಿಯನ್ನು ಕಣ್ತುಂಬಿಕೊಳ್ಳಿ…

ವೈರಲ್ ಆಯ್ತು ಕ್ವಾರಂಟೈನ್ ಕ್ರಿಕೆಟ್ ವಿಡಿಯೋ….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + nine =
Remember me
