ಬೆಂಗಳೂರು:ರ‌್ಯಾಪಿಡೊ ಬೈಕ್ ಬುಕ್ ಮಾಡಿದ್ದ ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ನಡೆಸಿದ್ದ ಘಟನೆಯಿಂದ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು ವಿವಿಧ ಕಂಪನಿಗಳ ಮತ್ತು ಏಜೆನ್ಸಿಗಳ ಪದಾಧಿಕಾರಿಗಳ ಜತೆ ಸಭೆ ನಡೆಸಿ ಕೆಲವೊಂದು ಕಟ್ಟುನಿಟ್ಟಿನ ಸೂಚನೆಗಳನ್ನು ಕೊಟ್ಟಿದ್ದಾರೆ.
ನಿಷೇಧಿತ ವಸ್ತುಗಳನ್ನು ಸರಬರಾಜು ಮಾಡದೇ, ಕ್ರಿಮಿನಲ್ಸ್ ಹಿನ್ನೆಲೆಯನ್ನು ಪರಿಶೀಲನೆ ನಡೆಸದೇ, ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ನಿಗಾ ವಹಿಸದೇ ಯಾವುದೇ ವಸ್ತುಗಳನ್ನು ಮನೆಗೆ ತಲುಪಿಸಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು, ಡಿಲವರಿ ಕಂಪನಿಗಳು ಏಜೆನ್ಸಿಗಳ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಮನೆಗಳಿಗೆ ಗೃಹೋಪಯೋಗಿ ವಸ್ತುಗಳು ಆಹಾರ ಊಟ ಸರಬರಾಜು ಮಾಡುವ ಕಂಪನಿಗಳ ಡಿಲವರಿ ಬಾಯ್​ಗಳಿಂದ ಲೈಂಗಿಕ ಕಿರುಕುಳ, ಡ್ರಗ್ಸ್ ಸಾಗಾಣೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಓಲಾ, ಉಬರ್, ರ‌್ಯಾಪಿಡೋ ಸೇರಿ ಡಿಲವರಿ ಕಂಪನಿಗಳು ಏಜೆನ್ಸಿಗಳ ಪದಾಧಿಕಾರಿಗಳ ಸಮನ್ವಯ ಸಭೆ ನಡೆಸಿ ಕಮೀಷನರ್ ಕಠಿಣ ನಿಯಮಗಳ ಪಾಲನೆಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ವಿಶೇಷ ಪೊಲೀಸ್ ಆಯುಕ್ತ ಎಂ.ಎ.ಸಲೀಂ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಜಂಟಿ ಪೊಲೀಸ್ ಆಯುಕ್ತ ಎಂ.ಎನ್ .ಅನುಚೇತ್, ಡಾ.ಎಸ್.ಡಿ. ಶರಣಪ್ಪ, ಓಲಾ, ಉಬರ್, ರ‌್ಯಾಪಿಡೋ, ಮುಂತಾದ ಟ್ಯಾಕ್ಸಿ ಅಗ್ರಿಗೇಟರ್ಸ್ ಹಾಗೂ ಆನ್‌ಲೈನ್ ಪುಡ್ ಡೆಲಿವರಿ, ಇನ್ನಿತರೆ ಸರಕು ಸಾಗಾಣಿಕೆ ಕಂಪನಿ, ಏಜೆನ್ಸಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸೂಚನೆಗಳೇನು?1) ಕಂಪನಿಗಳು ಮತ್ತು ಏಜೆನ್ಸಿಗಳಲ್ಲಿ ಕೆಲಸ ಮಾಡುವ ನೌಕರರ ಕ್ರಿಮಿನಲ್ ಹಿನ್ನೆಲೆಯನ್ನು ಪರಿಶೀಲಿಸಬೇಕು.2) ಗುರುತಿನ ಬಗ್ಗೆ ಕನಿಷ್ಠ ಎರಡು ದಾಖಲಾತಿಗಳನ್ನು ಹಾಗೂ ಅವರು ಉಪಯೋಗಿಸುವ ವಾಹನಗಳ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ ನಂತರವೇ ಕೆಲಸಕ್ಕೆ ತೆಗೆದುಕೊಳ್ಳಬೇಕು.3) ಮನೆಗಳಿಗೆ ಗೃಹೋಪಯೋಗಿ ವಸ್ತುಗಳು ಆಹಾರ ಊಟ ಸರಬರಾಜು ಮಾಡುವ ಕಂಪನಿಗಳ ಡಿಲಿವರಿ ಬಾಯ್‌ಗಳಿಂದ ಲೈಂಗಿಕ ಕಿರುಕುಳ ಡ್ರಗ್ಸ್ ಸೇರಿ ನಿಷೇಧಿತ ವಸ್ತುಗಳ ಸಾಗಾಣೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳು ನಡೆಯುವುದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು.4) ಹೊಸದಾಗಿ ನೇಮಕ ಮಾಡಿಕೊಳ್ಳುವ ನೌಕರರ ಕ್ರಿಮಿನಲ್ ಹಿನ್ನೆಲೆಗಳ ಪೂರ್ವಾಪರ ಪರಿಶೀಲನೆ ನಡೆಸಲು ಸೇವಾ ಸಿಂಧೂ ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳುವುದು.5) ಟ್ಯಾಕ್ಸಿ ಬುಕ್ ಮಾಡಿರುವ ಗ್ರಾಹಕರು, ಪ್ರಯಾಣ ಪ್ರಾರಂಭಿಸಿದ ಬಳಿಕ ನಿಗದಿತ ಸ್ಥಳಕ್ಕೆ ನಿರ್ದಿಷ್ಟ ಸಮಯಕ್ಕೆ ತಲುಪಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದು.6) ಗ್ರಾಹಕರು ಬುಕ್ ಮಾಡಿದ ಸ್ವತ್ತುಗಳು ನಿಗದಿತ ಸಮಯಕ್ಕೆ ಅವರ ಸ್ಥಳಕ್ಕೆ ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ತಾಂತ್ರಿಕ ಸೌಲಭ್ಯಗಳ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವುದು.7) ಸಂಸ್ಥೆಯ ಸ್‌ಟಾವೇರ್ ಅಪ್ಲಿಕೇಷನ್‌ಗಳಲ್ಲಿ ಹಾಗೂ ವಾಹನಗಳಲ್ಲಿ ಸೆಫ್ಟಿ ಸ್ಟಿಕರ್ ೧೧೨ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವುದು.8) ಸಂಸ್ಥೆಯ ಸಮವಸ್ತ್ರಗಳು ದುರುಪಯೋಗದಂತೆ, ನೌಕರರು ಕೆಲಸ ಬಿಟ್ಟಾಗ ಅವರಿಗೆ ನೀಡಲಾಗಿದ್ದ ಸಂಸ್ಥೆಯ ಗುರುತಿನ ಪತ್ರ ಇನ್ನಿತರ ವಸ್ತುಗಳನ್ನು ವಾಪಸ್ಸು ಪಡೆಯುವುದು ಕಡ್ಡಾಯ.9) ಡಂಝೋ, ಪೋರ್ಟರ್, ಪ್ಲಿಪ್ ಕಾರ್ಟ್ ಮುಂತಾದ ಡೆಲಿವರಿ ಪ್ಲಾಟ್‌ಫಾರಂಗಳಲ್ಲಿ ನಿಷೇದಿತ ವಸ್ತುಗಳನ್ನು ಸರಬರಾಜು ಮಾಡಬಾರದು.10) ಗ್ರಾಹಕರು ಬುಕ್ ಮಾಡಿರುವ ವಸ್ತುಗಳನ್ನು ಬುಕಿಂಗ್ ಮಾಡಿರುವ ಸ್ಥಳಗಳಲ್ಲಿ ಮಾತ್ರವೇ ಡೆಲಿವರಿ ಮಾಡತಕ್ಕದ್ದು, ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ವಸ್ತುಗಳನ್ನು ನೀಡದಂತೆ ತಿಳುವಳಿಕೆ ನೀಡುವುದು.11) ಡೆಲಿವರಿ ವಾಹನಗಳ ಸವಾರರು ಬಹುತೇಕ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಅವರ ಸುರಕ್ಷತೆ ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿಯಮಗಳ ಪಾಲನೆ ಮಾಡುವಂತೆ ತಮ್ಮ ತಮ್ಮ ಸಂಸ್ಥೆಯ ನೌಕರರಿಗೆ ಜಾಗೃತಿ ಉಂಟು ಮಾಡುವುದು.12) ಪ್ರತಿಯೊಂದು ಸಂಸ್ಥೆಗಳಿಂದ ತುರ್ತು ಮಾಹಿತಿ ವಿನಿಮಯಕ್ಕಾಗಿ ೨೪/೭ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವುದು.13) ತುರ್ತು ಸಂದರ್ಭಗಳಲ್ಲಿ ಗ್ರಾಹಕರು ತಮ್ಮ ಸಮಸ್ಯೆಗಳ ಬಗ್ಗೆ ನೋಡಲ್ ಅಧಿಕಾರಿಯವರಿಗೆ ಕರೆ ಮಾಡಿ ತಿಳಿಸಿದಾಗ, ಅಂತಹ ದೂರುಗಳನ್ನು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳಲು ಸಹಕರಿಸುವುದು.14) ಸಾರ್ವಜನಿಕರ/ಗ್ರಾಹಕರ ಸಂಪರ್ಕಕ್ಕೆ ಬರುವ ನೌಕಕರಿಗೆ ನಿರಂತರವಾಗಿ ಸಂವೇದನ ಶೀಲತೆ ಬಗ್ಗೆ ತರಭೇತಿ ಕಾರ್ಯಾಗಾರಗಳನ್ನು ನಡೆಸುವುದು.15) ಡೆಲಿವರಿ ನೀಡಲು ಹೋಗುವ ನೌಕರರು ಕೆಲವೊಂದು ಸಂದರ್ಭಗಳಲ್ಲಿ ಸುಲಿಗೆ, ಹಲ್ಲೆಗೆ ಒಳಗಾಗಿರುವ ಪ್ರಕರಣಗಳು ವರದಿಯಾಗಿದ್ದು, ಅಂತಹ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾದ ಕಾನೂನು ಕ್ರಮಗಳನ್ನು ಜರುಗಿಸುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
