ಬೊಮ್ಮನಹಳ್ಳಿ:SSLC ಪರೀಕ್ಷೆಯಲ್ಲಿ ಫೇಲ್​ ಆದರೆ ಆಗುವ ಅವಮಾನ ಅಂತಿಂಥದ್ದಲ್ಲ. ಒಂದು ವಿಷಯದಲ್ಲಿ ಅನುತ್ತೀರ್ಣರಾದರೂ ಹಣೆಪಟ್ಟಿ ಮಾತ್ರ ಖಂಡಿತವಾಗಿಯೂ ಬಿದ್ದೇ ಬೀಳುತ್ತದೆ. ಈ ಸಂದರ್ಭ ವಿದ್ಯಾರ್ಥಿಗಳೂ ಮಾನಸಿಕವಾಗಿ ಕುಗ್ಗಿರುತ್ತಾರೆ. ಬೊಮ್ಮನಹಳ್ಳಿಯ ಬಂಡೇಪಾಳ್ಯ ಪೊಲೀಸರು ಮಾತ್ರ ಫೇಲ್​ ಆದ ವಿಧ್ಯಾರ್ಥಿಗಳಿಗೆ ಆಸರೆಯಾಗಿದ್ದು ಎಲ್ಲರಿಂದಲೂ ಮೆಚ್ಚುಗೆ ಪಡೆದಿದ್ದಾರೆ.
ಇದನ್ನೂ ಓದಿ:SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಸಿಗಲಿದೆ 10% ಗ್ರೇಸ್ ಮಾರ್ಕ್ಸ್: ಯಾವೆಲ್ಲ ವಿಷಯಕ್ಕೆ ಸಿಗಲಿದೆ?
ಬೊಮ್ಮನಹಳ್ಳಿಯ ಬಂಡೇಪಾಳ್ಯದ ಪೊಲೀಸರು SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿಧ್ಯಾರ್ಥಿಗಳನ್ನು ಗುರುತಿಸಿ ಉಚಿತ ಟ್ಯೂಷನ್​ ವ್ಯವಸ್ಥೆ ಮಾಡಿದ್ದಾರೆ. ಇವರು 20 ದಿನಗಳ ಕಾಲ 65 ವಿದ್ಯಾರ್ಥಿಗಳಿಗೆ ಟ್ಯೂಷನ್​ ವ್ಯವಸ್ಥೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಕ್ಕಳಿಗೆ ಪ್ರತಿದಿನವೂ ಎಲ್ಲಾ ಆರು ಸಬ್ಜೆಕ್ಟ್​ಗನ್ನು ಪಾಠ ಮಾಡಲು ತರಗತಿ ವ್ಯವಸ್ಥೆಯನ್ನು ಪೊಲೀಸರು ಮಾಡಿಸಿಕೊಟ್ಟಿದ್ದಾರೆ. ತರಗತಿಗಳಲ್ಲಿ ನುರಿತ ಶಿಕ್ಷಕರಿಂದ ತರಬೇತಿ ನೀಡಿಸಿದ್ದು, ಒಟ್ಟು 35 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಇದನ್ನೂ ಓದಿ:ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ
ಪೊಲೀಸರು ನಗರದ ಶೊಬೋದಿನ ಶಾಲೆಯಲ್ಲಿ ಪ್ರತಿ ದಿನ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಸಿದ್ದರು. ಆರಕ್ಕೆ ಆರೂ ಸಜ್ಬೆಕ್ಟ್ ಫೇಲ್ ಆಗಿದ್ದ ಸಿದ್ದಿಕ್ ಎಂಬ ವಿದ್ಯಾರ್ಥಿ ಕೂಡ ತೇರ್ಗಡೆಯಾಗಿದ್ದಾನೆ. ಈ ಹಿನ್ನೆಲೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಬಂಡೆ ಪಾಳ್ಯ ಠಾಣೆ ಎದುರು ತೇರ್ಗಡೆ ಹೊಂದಿದ ವಿಧ್ಯಾರ್ಥಿಗಳು ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ. ಈ ಸಂದರ್ಭ ವಿಧ್ಯಾರ್ಥಿಗಳಿಗೂ ಸನ್ಮಾನಿಸಿ ಗೌರವಿಸಲಾಗಿದೆ.
ಬಂಡೆಪಾಳ್ಯ ಸಿಪಿಐ ಎಲ್.ವೈ.ರಾಜೇಶ್ ಹಾಗೂ ತಂಡ, ರಾಜಲಾಂಚನ ಸಂಸ್ಥೆ ಹಾಗೂ ದರ್ಪಣ ಸಂಸ್ಥೆ ಸಹಭಾಗಿತ್ವದಲ್ಲಿ ಈ ಉತ್ತಮ ಕಾರ್ಯವನ್ನು ನಡೆಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
