ಬೆಂಗಳೂರು:15 ದಿನಗಳವರೆಗೂ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್​ ನೀರು ಹರಿಸಲು ರಾಜ್ಯಕ್ಕೆ ಸುಪ್ರೀಂಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಇದೀಗ ಕರುನಾಡಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು, ಹಲವು ಸಂಘಟನೆಗಳು ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಈ ಬೆನ್ನಲ್ಲೇ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿದ್ದಾರೆ.
ಇದನ್ನೂ ಓದಿ:ಇಂಫಾಲ್ ಜಿಲ್ಲೆಯಲ್ಲಿ ಮತ್ತೆ ಕರ್ಪ್ಯೂ ಜಾರಿ; ಬಂಧಿತ ಐವರು ಯುವಕರನ್ನು ಬಿಡುಗಡೆಗೊಳಿಸುವಂತೆ ಒತ್ತಾಯ
ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ಆಗದಂತೆ ನಗರದ ಪೊಲೀಸರು ಹೈ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಂದು (ಸೆ.22) ಬೆಳಗ್ಗೆ 11 ಗಂಟೆಯ ನಂತರ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರ ಭದ್ರತೆ ನಿಯೋಜಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ಹರಿಸಿ: ಮಂಡ್ಯ ಪಂಪ್​ಹೌಸ್​ಗೆ ಸಂಘಟನೆಗಳ ಮುತ್ತಿಗೆ
ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಕಾವೇರಿಯನ್ನೇ ನಂಬಿ ಬದುಕುತ್ತಿರುವ ಮಂಡ್ಯದಲ್ಲಿ ಕೂಡ ಕಾವೇರಿ ಹೋರಾಟ ತೀವ್ರಗೊಂಡಿದೆ. ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಪಂಪ್ ಹೌಸ್​ಗೆ ವಿವಿಧ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ಸರಬರಾಜು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ರಿವೀಲ್​ ಆಯ್ತು ಬಹುನಿರೀಕ್ಷಿತ ‘ಲಿಯೋ’ ಚಿತ್ರದ ರನ್​ಟೈಮ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
